ಪೊಲೀಸ್ ಇಲಾಖೆಯಿಂದ ಭರ್ಜರಿ ನೇಮಕಾತಿ: 2,314 ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ KEA ಅರ್ಜಿ ಆಹ್ವಾನ
ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ.

ಬೆಂಗಳೂರು: ವರ್ಷಗಳಿಂದ ಸರ್ಕಾರಿ ಉದ್ಯೋಗದ ಕನಸ್ಸು ಕಂಡು, ರಾತ್ರಿ-ಬೆಳಿಗ್ಗೆ ಎನ್ನದೇ ಓದುತ್ತಿದ್ದ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಒಂದಾದಮೇಲೆ ಒಂದರಂತೆ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಮೂಲಕ ನೇಮಕಾತಿಗೆ ಮುಂದಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ.
ಹುದ್ದೆಗಳ ವಿವರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP), ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF), ಮತ್ತು ಇನ್ಫಾಂಟ್ರಿ ಬೆಟಾಲಿಯನ್ (IRB) ವಿಭಾಗಗಲ್ಲಿ ಒಟ್ಟು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅದರಲ್ಲಿ,
ಉಳಿಕೆ ಮೂಲ ವೃಂದ: 1,455 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ: 859 ಹುದ್ದೆಗಳು
ಅರ್ಹತೆ ಮತ್ತು ವಯೋಮಿತಿ:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ: 18 ರಿಂದ 33 ವರ್ಷಗಳು (SC/ST/OBC ಅಭ್ಯರ್ಥಿಗಳಿಗೆ 35 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ).
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಒಟ್ಟು ನಾಲ್ಕು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ:
ಲಿಖಿತ ಪರೀಕ್ಷೆ: 100 ಅಂಕಗಳ OMR ಆಧಾರಿತ ವಸ್ತುನಿಷ್ಠ ಪರೀಕ್ಷೆ (0.25 ನೆಗೆಟಿವ್ ಮಾರ್ಕ್ಸ್ ಇರುತ್ತದೆ).
ದೈಹಿಕ ಗುಣಮಟ್ಟದ ಪರೀಕ್ಷೆ
ದೈಹಿಕ ಸಹಿಷ್ಣುತೆ ಪರೀಕ್ಷೆ
ವೈದ್ಯಕೀಯ ತಪಾಸಣೆ
ವೇತನ ಶ್ರೇಣಿ: ₹37,500 ರಿಂದ ₹76,100/-
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 13 ಜುಲೈ 2026 (ಈಗಾಗಲೇ ಪ್ರಾರಂಭವಾಗಿದೆ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಆಗಸ್ಟ್ 2026 (ಕೊನೆಯ ದಿನದ ತನಕ ಕಾಯಬೇಡಿ)
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 11 ಆಗಸ್ಟ್ 2026
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 20 ಸೆಪ್ಟೆಂಬರ್ 2026
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ವರ್ಗದ (ಪ್ರವರ್ಗ - 2ಎ 2ಬಿ 3ಎ 3ಬಿ) ಅಭ್ಯರ್ಥಿಗಳಿಗೆ 750 ರೂಪಾಯಿ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಒಬಿಸಿ ವರ್ಗದ (ಪ್ರವರ್ಗ 1) ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ ಆದ https://cetonline.karnataka.gov.in/KSRP_2026/Account/Login ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.
ನೇಮಕಾತಿ ಅಧಿಸೂಚನೆ:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




