PUC ಪಾಸಾಗಿರುವ ಮಹಿಳೆಯರಿಗೆ ಗುಡ್ ನ್ಯೂಸ್: ಈ ಜಿಲ್ಲೆಯಲ್ಲಿ ಭರ್ಜರಿ ಉದ್ಯೋಗಾವಕಾಶ, ಈಗಲೇ ಅರ್ಜಿ ಸಲ್ಲಿಸಿ
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ.

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ.
ಹುದ್ದೆಯ ವಿವರ:
ಮಂಗಳೂರು ನಗರ ವ್ಯಾಪ್ತಿ: ಅಂಗನವಾಡಿ ಕಾರ್ಯಕರ್ತೆ: 07 ಹುದ್ದೆಗಳು, ಅಂಗನವಾಡಿ ಸಹಾಯಕಿ: 32 ಹುದ್ದೆಗಳು
ಮಂಗಳೂರು ಗ್ರಾಮಾಂತರ ವ್ಯಾಪ್ತಿ: ಅಂಗನವಾಡಿ ಕಾರ್ಯಕರ್ತೆ: 04 ಹುದ್ದೆಗಳು, ಅಂಗನವಾಡಿ ಸಹಾಯಕಿ: 39 ಹುದ್ದೆಗಳು
ತಾಲ್ಲೂಕುವಾರು ಹಂಚಿಕೆ:
ಮಂಗಳೂರು ತಾಲ್ಲೂಕು: 14 ಸಹಾಯಕಿಯರ ಹುದ್ದೆಗಳು
ಮೂಲ್ಕಿ ತಾಲ್ಲೂಕು: 03 ಸಹಾಯಕಿಯರ ಹುದ್ದೆಗಳು
ಮೂಡುಬಿದಿರೆ ತಾಲ್ಲೂಕು: 04 ಸಹಾಯಕಿಯರ ಹುದ್ದೆಗಳು
ಉಳ್ಳಾಲ ತಾಲ್ಲೂಕು: 04 ಕಾರ್ಯಕರ್ತೆಯರು, 18 ಸಹಾಯಕಿಯರ ಹುದ್ದೆಗಳು
ಅರ್ಹತೆ :
ಕೇವಲ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.
ವಯೋಮಿತಿ: ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 35 ವರ್ಷ ವಯೋಮಿತಿ ಮೀರಬಾರದು.
ವಾಸಸ್ಥಳ: ಅಭ್ಯರ್ಥಿಗಳು ಕಡ್ಡಾಯವಾಗಿ ಹುದ್ದೆ ಖಾಲಿ ಇರುವ ವಾರ್ಡ್ ಅಥವಾ ಗ್ರಾಮದ ನಿವಾಸಿಯಾಗಿರಬೇಕು.
ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಗೆ ಕನಿಷ್ಠ ಪಿಯುಸಿ ಅಥವಾ ತತ್ಸಮಾನ ಅರ್ಹತೆ ಅಗತ್ಯ. ಸಹಾಯಕಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪಾಸ್ ಆಗಿರಬೇಕು. ಜೊತೆಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಅದರಂತೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟಂತಹ ಶಿಶು ಅಭಿವೃದ್ಧಿ ಯೋಜನೆ ಕಚೇರಿಗೆ (CDPO) ತಲುಪಿಸಬೇಕು.
ಕೊನೆಯ ದಿನಾಂಕ: 10 ಆಗಸ್ಟ್ 2026. (ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.)
ಹೆಚ್ಚಿನ ವಿವರ ಹಾಗೂ ಅರ್ಜಿಗಾಗಿ ಅಭ್ಯರ್ಥಿಗಳು, ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ: 0824-2959809, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ: 0824-2263199 ಸಂಪರ್ಕಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




