KFWCCF ನೇಮಕಾತಿ 2026: ಅರಣ್ಯ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆಯೆ ನೇರ ಕೆಲಸ; ₹70,000 ಸಂಬಳ!
KFWCCF ಬೆಂಗಳೂರಿನಲ್ಲಿ ಖಾಲಿ ಇರುವ PRO ಹುದ್ದೆಯ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹70,000 ಸಂಬಳ ಸಿಗಲಿದೆ. ಆ ಕುರಿತ ವರದಿ ಇಲ್ಲಿದೆ.

KFWCCF PRO Recruitment 2026: ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಒಂದು ಉತ್ತಮ ಅವಕಾಶ ಎದುರಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನವು (KFWCCF) ತನ್ನ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಸಾರ್ವಜನಿಕ ಸಂಪರ್ಕಾಧಿಕಾರಿ (Public Relation Officer) ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ.
ಹುದ್ದೆಯ ಸಂಪೂರ್ಣ ವಿವರ:
ಹುದ್ದೆಯ ಹೆಸರು: ಸಾರ್ವಜನಿಕ ಸಂಪರ್ಕಾಧಿಕಾರಿ (PRO)
ಒಟ್ಟು ಹುದ್ದೆಗಳು: 01
ಕೆಲಸದ ಸ್ಥಳ: ಬೆಂಗಳೂರು
ಮಾಸಿಕ ವೇತನ: ₹70,000
ನೇಮಕಾತಿ ಅವಧಿ: ಒಪ್ಪಂದದ ಆಧಾರದ ಮೇಲೆ 2 ವರ್ಷ
ಅರ್ಹತೆ ಮತ್ತು ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ತತ್ಸಮಾನ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ನೇಮಕಾತಿಗೆ ಯಾವುದೇ ರೀತಿಯ ಸ್ಪರ್ಧಾತ್ಮಕ ಅಥವಾ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತರು ಆಫ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಧಿಕೃತ ವೆಬ್ಸೈಟ್ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಿ, ಅಗತ್ಯವಿರುವ ವಿದ್ಯಾರ್ಹತೆ ಹಾಗೂ ವೃತ್ತಿಪರ ಅನುಭವದ ಸ್ವಯಂ-ದೃಢೀಕೃತ ದಾಖಲೆಗಳನ್ನು ಲಗತ್ತಿಸಬೇಕು. ನಂತರ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ, ಅದರ ಮೇಲೆ 'Application for the Position of PRO' ಎಂದು ಸ್ಪಷ್ಟವಾಗಿ ಬರೆದು ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಅಥವಾ ಖುದ್ದಾಗಿ ತಲುಪಿಸಬೇಕಾಗಿ ವಿನಂತಿ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು - 560 003.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




