ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಬಂಪರ್ ನೇಮಕಾತಿ! 545 ಆಫೀಸರ್ ಹುದ್ದೆಗಳಿಗೆ ಪದವಿಧರರಿಂದ ಅರ್ಜಿ ಆಹ್ವಾನಿಸಿದ PNB; ಸಂಬಳ 85 ಸಾವಿರ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪದವಿಧರರಿಗೆ ದೇಶದ 2ನೇ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್-I ಅಡಿಯಲ್ಲಿ ಒಟ್ಟು 545 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

PNB Recruitment 2026: ಬ್ಯಾಂಕ್ ಕೆಲಸ ಹುಡುಕುತ್ತಿರುವ ಪದವಿಧರರಿಗೆ ಗುಡ್ ನ್ಯೂಸ್; ಯಾಕಂದ್ರೆ ದೇಶದ 2ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬರೋಬ್ಬರಿ 545 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆ ವಿವರ:
PNB ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್-I (JMGS-I) ಅಡಿಯಲ್ಲಿ ಒಟ್ಟು 545 ಲೋಕಲ್ ಬ್ಯಾಂಕ್ ಆಫೀಸರ್ ಗಳನ್ನು ನೇಮಕ ಮಾಡಿಕೊಳ್ಳಲಿದೆ. ಅದರಲ್ಲಿ, ಕರ್ನಾಟಕದಲ್ಲೇ ಕನ್ನಡ ಬರುವ 78 ಆಫೀಸರ್ ನೇಮಕವಾಗಲಿದೆ.
ಅರ್ಹತೆ:
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಹೊಂದಿರಬೇಕು.
ಭಾಷಾ ಜ್ಞಾನ: ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಉತ್ತಮ ಪ್ರಾವೀಣ್ಯತೆ ಹೊಂದಿರಬೇಕು.
ಅನುಭವ: ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ (RRB) ಕನಿಷ್ಠ 12 ತಿಂಗಳು (1 ವರ್ಷ) ಆಫೀಸರ್ ಅಥವಾ ಕ್ಲೆರಿಕಲ್ ಕೆಡರ್ ಆಗಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಯೋಮಿತಿ (01.07.2026 ಕ್ಕೆ ಅನ್ವಯಿಸುವಂತೆ): ಕನಿಷ್ಠ ವಯಸ್ಸು: 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು: 30 ವರ್ಷಗಳು ಇನ್ನು, ನಿಯಮಾವಳಿಗಳ ಪ್ರಕಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಸಂಬಳ:
₹48,480 ರಿಂದ ₹85,920 ರವರೆಗೆ ಸಂಬಳ ಹಾಗೂ ಇತರ ಸವಲತ್ತುಗಳು ಇರಲಿವೆ.
ಆಯ್ಕೆ ಪ್ರಕ್ರಿಯೆ
ಆನ್‌ಲೈನ್ ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ PNB Careers Portal ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ/ OBC / EWS: ₹1,180
SC / ST / ವಿಕಲಚೇತನರು: ₹59
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರವೇ ಪಾವತಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: 20 ಜುಲೈ 2026 (ಈಗಾಗಲೇ ಆರಂಭವಾಗಿದೆ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 9 ಆಗಸ್ಟ್ 2026 (ಕೊನೆಯ ದಿನದ ತನಕ ಕಾಯಬೇಡಿ)
ಪರೀಕ್ಷಾ ಕೇಂದ್ರಗಳು: ಕರ್ನಾಟಕದಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಶಿವಮೊಗ್ಗ,
ಮಂಗಳೂರು, ಬೆಳಗಾವಿ
ನೇಮಕಾತಿ ಅಧಿಸೂಚನೆ:
ಅರ್ಜಿ ಸಲ್ಲಿಕೆ ಲಿಂಕ್:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




