ಇಂಜಿನಿಯರ್ ಪದವಿಧರರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 4,098 ಹುದ್ದೆಗಳಿಗೆ ನೇಮಕಾತಿ, ಸಂಬಳ 36 ಸಾವಿರ+
ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ ಕಿರು ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ರೈಲ್ವೆ ನೇಮಕಾತಿ ಮಂಡಳಿಯು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ವಿಭಾಗಗಳ ಒಟ್ಟು 4,098 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಿದೆ.

ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ ಕಿರು ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ರೈಲ್ವೆ ನೇಮಕಾತಿ ಮಂಡಳಿಯು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ವಿಭಾಗಗಳ ಒಟ್ಟು 4,098 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಿದೆ. ಆ ಕುರಿತ ವರದಿ ಇಲ್ಲಿದೆ:
ನೇಮಕಾತಿ ವಿವರ:
ಜೂನಿಯರ್ ಇಂಜಿನಿಯರ್ (JE): 3,749 ಹುದ್ದೆಗಳು (ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ವರ್ಕ್ಸ್‌ಶಾಪ್ ಇತ್ಯಾದಿ)
ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS): 314 ಹುದ್ದೆಗಳು
ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟೆಂಟ್ (CMA): 35 ಹುದ್ದೆಗಳು
ಅರ್ಹತೆ:
ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಪಟ್ಟ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಬಿ.ಇ/ಬಿ.ಟೆಕ್ ಪದವಿ ಪಡೆದಿರಬೇಕು.
ವಯೋಮಿತಿ: 01 ಜನವರಿ 2027 ಕ್ಕೆ ಅನ್ವಯಿಸುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ (ಸರ್ಕಾರಿ ನಿಯಮಾವಳಿಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ).
ಸಂಬಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಅನುಸಾರ Pay Level 6 ರ ಅಡಿಯಲ್ಲಿ 35,400 ಪ್ರತಿ ತಿಂಗಳು ವೇತನ ಸಿಗಲಿದೆ. ಇದರೊಂದಿಗೆ, HRA, DA ಮತ್ತು ರೈಲ್ವೆ ಇಲಾಖೆಯ ಇತರೆ ಭತ್ಯೆಗಳೂ ಸಿಗಲಿವೆ.
ಪ್ರಮುಖ ದಿನಾಂಕ:
ವಿವರವಾದ ಅಧಿಸೂಚನೆ ಪ್ರಕಟಣೆ: 13 ಆಗಸ್ಟ್ 2026
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 14 ಆಗಸ್ಟ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಸೆಪ್ಟೆಂಬರ್ 2026

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಒಟ್ಟು 4 ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ,
ಕಂಪ್ಯೂಟರ್ ಆಧಾರಿತ ಪರೀಕ್ಷೆ - 1 (CBT 1)
ಕಂಪ್ಯೂಟರ್ ಆಧಾರಿತ ಪರೀಕ್ಷೆ - 2 (CBT 2 - ತಾಂತ್ರಿಕ ವಿಷಯಗಳು)
ದಾಖಲಾತಿ ಪರಿಶೀಲನೆ (Document Verification)
ವೈದ್ಯಕೀಯ ಪರೀಕ್ಷೆ (Medical Examination)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




