ಪದವೀಧರರಿಗೆ ಸುವರ್ಣಾವಕಾಶ; ISROದಲ್ಲಿ 244 ಹುದ್ದೆಗಳ ಬಂಪರ್ ನೇಮಕಾತಿ! ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ!
ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಕರಿಗೆ ಇಸ್ರೋ ಗುಡ್ ನ್ಯೂಸ್ ನೀಡಿದೆ. ಇಸ್ರೋ ಸೆಂಟ್ರಲೈಜ್ಡ್ ರೆಸಿರುಇಟ್ಮೆಂಟ್ ಬೋರ್ಡ್ (ICRB) ಮೂಲಕ 244 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ISRO Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಿದೆ. ಇಸ್ರೋ ತನ್ನ ಕೇಂದ್ರೀಕೃತ ನೇಮಕಾತಿ ಮಂಡಳಿ (ICRB) ಮೂಲಕ ಒಟ್ಟು 244 ಆಡಳಿತಾತ್ಮಕ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಪದವೀಧರ ಅಭ್ಯರ್ಥಿಗಳು ಇಸ್ರೋ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ವರದಿ ಇಲ್ಲಿದೆ:
ಹುದ್ದೆಗಳ ವಿವರ:
ಒಟ್ಟು 244 ಹುದ್ದೆಗಳು
ಅಸಿಸ್ಟೆಂಟ್: 130 ಹುದ್ದೆಗಳು
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್: 82 ಹುದ್ದೆಗಳು
ಅಪ್ಪರ್ ಡಿವಿಷನ್ ಕ್ಲರ್ಕ್: 22 ಹುದ್ದೆಗಳು
ಸ್ಟೆನೋಗ್ರಾಫರ್: 10 ಹುದ್ದೆಗಳು
(ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಹಾಕಬಹುದು, ಆದರೆ ಪ್ರತ್ಯೇಕ ಅರ್ಜಿ ಹಾಕಬೇಕು)
ಅರ್ಹತೆ:
ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಕನಿಷ್ಠ ಶೇಕಡಾ 60 ಅಂಕಗಳು ಅಥವಾ 6.32 CGPA ಯೊಂದಿಗೆ ಪದವಿ ಪೂರ್ಣಗೊಳಿಸಿರಬೇಕು.
ಸ್ಟೆನೋಗ್ರಾಫರ್ ಮತ್ತು ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಇಂಗ್ಲಿಷ್ ಟೈಪಿಂಗ್‌ನಲ್ಲಿ ವೇಗ ಮತ್ತು ಕಂಪ್ಯೂಟರ್ ಜ್ಞಾನ ಅಗತ್ಯವಾಗಿದೆ.
ವಯೋಮಿತಿ:
ಗರಿಷ್ಠ ವಯಸ್ಸು: ಆಗಸ್ಟ್ 16, 2026 ಕ್ಕೆ ಅನ್ವಯಿಸುವಂತೆ 28 ವರ್ಷಗಳು.
ವಯೋಮಿತಿ ಸಡಿಲಿಕೆ: ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಅಡಿಯಲ್ಲಿ ಮಾಸಿಕ ₹25,500 ಮೂಲ ವೇತನ ದೊರೆಯಲಿದೆ. ಇದರೊಂದಿಗೆDA, HRA ಮತ್ತು ಸಾರಿಗೆ ಭತ್ಯೆಗಳು ಸಿಗಲಿವೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: ಜುಲೈ 27, 2026 (ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 16, 2026 (ರಾತ್ರಿ 11:59 ರವರೆಗೆ - ಕೊನೆಯ ದಿನದ ತನಕ ಕಾಯಬೇಡಿ)
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 17, 2026
ಅರ್ಜಿ ಸಲ್ಲಿಸುವುದು ಹೇಗೆ?
isro.gov.in ವೆಬ್‌ಸೈಟ್‌ಗೆ ಹೋಗಿ
"Career" > "ICRB-01/2026" ಲಿಂಕ್ ಕ್ಲಿಕ್ ಮಾಡಿ
Email ID ಮತ್ತು Mobile Number ನೊಂದಿಗೆ Registration ಮಾಡಿ
Login ಮಾಡಿ ಅರ್ಜಿ ಫಾರ್ಮ್ ಭರ್ತಿ ಮಾಡಿ, ಫೋಟೋ-ಸಹಿ ಅಪ್‌ಲೋಡ್ ಮಾಡಿ
ಶುಲ್ಕ ಪಾವತಿಸಿ ಅಂತಿಮವಾಗಿ Submit ಮಾಡಿ. Printout ತೆಗೆದಿಡಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


