SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಮೂರು ಹಂತದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 1500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಜೂನ್ 18 ರಿಂದ ಜುಲೈ 8 ರವರೆಗೆ ಆನ್‌ಲೈನ್‌ನಲ್ಲಿ ಪದವೀಧರರು ಅರ್ಜಿ ಸಲ್ಲಿಸಬಹುದು. ಮೂರು ಹಂತದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.
ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 18 ರಿಂದಲೇ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹುದ್ದೆಗಳ ವಿವರ:
ಸಾಮಾನ್ಯ ವರ್ಗ (General): 588 ಹುದ್ದೆಗಳು
ಒಬಿಸಿ ವರ್ಗ (OBC): 390 ಹುದ್ದೆಗಳು
ಎಸ್‌ಸಿ ವರ್ಗ (SC): 234 ಹುದ್ದೆಗಳು
ಎಸ್‌ಟಿ ವರ್ಗ (ST): 144 ಹುದ್ದೆಗಳು
ಇಡಬ್ಲ್ಯೂಎಸ್ ವರ್ಗ (EWS): 144 ಹುದ್ದೆಗಳು
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು
ಪ್ರಸ್ತುತ ಅಂತಿಮ ವರ್ಷ ಅಥವಾ ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು
(ಸೆಪ್ಟೆಂಬರ್ 30, 2026 ರೊಳಗೆ ತಾವು ಪದವಿ ಪೂರ್ಣಗೊಳಿಸಿರುವ ಪುರಾವೆ ಒದಗಿಸುವುದು ಕಡ್ಡಾಯ)
ವಯೋಮಿತಿ
ಏಪ್ರಿಲ್ 1, 2026 ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಸರ್ಕಾರದ ನಿಯಮಗಳ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರಲಿದ್ದು, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
3 ಹಂತಗಳಲ್ಲಿ ಆಯ್ಕೆ ಪ್ರತಿಕ್ರಿಯೆ
ಎಸ್‌ಬಿಐ ಪಿಒ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಒಟ್ಟು ಮೂರು ಪ್ರಮುಖ ಹಂತಗಳಲ್ಲಿ ನಡೆಯಲಿದೆ.
ಮೊದಲ ಹಂತ (ಪ್ರಾಥಮಿಕ ಪರೀಕ್ಷೆ): ಇದರಲ್ಲಿ ಇಂಗ್ಲಿಷ್ ಭಾಷೆ, ತಾರ್ಕಿಕ ಸಾಮರ್ಥ್ಯ ಮತ್ತು ಪರಿಮಾಣಾತ್ಮಕ ಸಾಮರ್ಥ್ಯದ ವಸ್ತುನಿಷ್ಠ ಪ್ರಶ್ನೆಗಳಿರುತ್ತವೆ.
ಎರಡನೇ ಹಂತ (ಮುಖ್ಯ ಪರೀಕ್ಷೆ): ಪ್ರಾಥಮಿಕ ಪರೀಕ್ಷೆಯಲ್ಲಿ ಪಾಸಾದವರಿಗೆ ಮುಖ್ಯ ಪರೀಕ್ಷೆ ನಡೆಯಲಿದ್ದು, ಇದು ವಸ್ತುನಿಷ್ಠ ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಎರಡೂ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ 1/4 ರಷ್ಟು ಋಣಾತ್ಮಕ ಅಂಕಗಳ ವ್ಯವಸ್ಥೆ ಇರಲಿದೆ.
ಅಂತಿಮ ಹಂತ: ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ವ್ಯಾಯಾಮಗಳು ಮತ್ತು ವೈಯಕ್ತಿಕ ಸಂದರ್ಶನವನ್ನು ಒಳಗೊಂಡಿರುತ್ತದೆ.
ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನ 48,480 ರೂ. ಇರಲಿದೆ. ಇದರೊಂದಿಗೆ ವಿವಿಧ ಭತ್ಯೆಗಳನ್ನು ಒಳಗೊಂಡಂತೆ ವಾರ್ಷಿಕ ಸಿಟಿಸಿ (CTC) ಸುಮಾರು 21.97 ಲಕ್ಷ ರೂ. ನೀಡುವ ಸಾಧ್ಯತೆ ಇದೆ. ಆಯ್ಕೆಯಾದ ಅಭ್ಯರ್ಥಿಗಳು ಮೂರು ವರ್ಷಗಳ ಅವಧಿಗೆ 2 ಲಕ್ಷ ರೂ. ಸೇವಾ ಬಾಂಡ್‌ಗೆ ಸಹಿ ಹಾಕಬೇಕಾಗುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ (General), ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳ ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ (PwD) ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಎಸ್‌ಬಿಐನ ಅಧಿಕೃತ ವೆಬ್‌ಸೈಟ್ (https://sbi.bank.in/web/careers/current-openings)ಗೆ ಭೇಟಿ ನೀಡಿ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.





