IGNOUದಲ್ಲಿ ಭರ್ಜರಿ ಉದ್ಯೋಗಾವಕಾಶ: ಪರೀಕ್ಷೆಯಿಲ್ಲದೆ ನೇರ ನೇಮಕಾತಿ; ತಿಂಗಳಿಗೆ ₹2 ಲಕ್ಷ ಸಂಬಳ; ಅರ್ಜಿ ಸಲ್ಲಿಕೆ ಹೇಗೆ?
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (IGNOU) ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 43 ಬೋಧನಾ ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

IGNOU Recruitment: ಬೋಧನಾ ಕ್ಷೇತ್ರದಲ್ಲಿ ಉನ್ನತ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ, ಪ್ರತಿಷ್ಠಿತ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU) ಸುವರ್ಣಾವಕಾಶ ಒದಗಿಸಿದೆ. ಜರ್ನಲಿಸಂ ಮತ್ತು ನ್ಯೂ ಮೀಡಿಯಾ ಸ್ಟಡೀಸ್ ಸೇರಿದಂತೆ ಹದಿನಾಲ್ಕು ವಿವಿಧ ವಿಭಾಗಗಳಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು, ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ:
ಹುದ್ದೆಗಳ ವಿವರ:
ಒಟ್ಟು 43 ಹುದ್ದೆಗಳು
ಪ್ರಾಧ್ಯಾಪಕರು: 21 ಹುದ್ದೆಗಳು
ಸಹ-ಪ್ರಾಧ್ಯಾಪಕರು: 16 ಹುದ್ದೆಗಳು
ಸಹಾಯಕ ಪ್ರಾಧ್ಯಾಪಕರು: 06 ಹುದ್ದೆಗಳು
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 20, 2026
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 20, 2026
ಹಾರ್ಡ್ ಕಾಪಿ ತಲುಪಿಸಲು ಕೊನೆಯ ದಿನ: ಅಕ್ಟೋಬರ್ 30, 2026 (ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಪ್ರಿಂಟ್‌ಔಟ್ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಇಗ್ನೌನ ನವದೆಹಲಿ ಕಚೇರಿಗೆ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು ಕಡ್ಡಾಯವಾಗಿದೆ)
ಅರ್ಹತೆ:
ವಿದ್ಯಾರ್ಹತೆ: ಯುಜಿಸಿ ನಿಯಮಾವಳಿಗಳು 2018ರ ಅನ್ವಯ ಹುದ್ದೆಗಳಿಗೆ ತಕ್ಕಂತೆ ಸಂಬಂಧಿಸಿದ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ, ನೆಟ್ ತೇರ್ಗಡೆ ಅಥವಾ ಪಿಎಚ್.ಡಿ ವಿದ್ಯಾರ್ಹತೆ ಹಾಗೂ ಅಗತ್ಯ ಬೋಧನಾ/ಸಂಶೋಧನಾ ಅನುಭವವನ್ನು ಹೊಂದಿರಬೇಕು.
ಸಂಬಳ:
₹57,700 ರಿಂದ ₹2,18,200 ವರೆಗೆ ಹುದ್ದೆಗಳಿಗೆ ಅನುಗುಣವಾಗಿ ಬದಲಾಗಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಇಗ್ನೌ ಅಧಿಕೃತ ವೆಬ್‌ಸೈಟ್ IGNOU Official Website ಮೂಲಕ ಆನ್‌ಲೈನ್‌ನಲ್ಲಿ ಮೊದಲು ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಸಲ್ಲಿಕೆಯಾದ ನಂತರ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ (ಹಾರ್ಡ್ ಕಾಪಿ) ಜೊತೆಗೆ ಅಗತ್ಯ ಸ್ವಯಂ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ "Director, Academic Coordination Division (ACD), Maidan Garhi, New Delhi-110068" ವಿಳಾಸಕ್ಕೆ ಅಕ್ಟೋಬರ್ 30 ರ ಒಳಗಾಗಿ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು ಕಡ್ಡಾಯವಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಮತ್ತು EWS ಅಭ್ಯರ್ಥಿಗಳಿಗೆ: ₹500 ಹಾಗೂ ಎಸ್‌ಸಿ, ಎಸ್‌ಟಿ, ವಿಕಲಚೇತನರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ (Free).
ಅರ್ಜಿಯೊಂದಿಗೆ ಲಗತ್ತಿಸಬೇಕಾದ ಅಗತ್ಯ ದಾಖಲೆಗಳು:
ಎಸ್‌ಎಸ್‌ಎಲ್‌ಸಿ, ಪದವಿ, ಸ್ನಾತಕೋತ್ತರ, ಎಂ.ಫಿಲ್ ಮತ್ತು ಪಿಎಚ್.ಡಿ ಅಂಕಪಟ್ಟಿಗಳು ಹಾಗೂ ಪ್ರಮಾಣಪತ್ರಗಳು.
ವೇತನ ಶ್ರೇಣಿ ಹಾಗೂ ಒಟ್ಟು ವೇತನವನ್ನು ನಮೂದಿಸಿರುವ ಸೇವಾ/ಅನುಭವ ಪ್ರಮಾಣಪತ್ರಗಳು (Experience Certificates), ನೇಮಕಾತಿ ಪತ್ರಗಳು ಮತ್ತು ಪೇ-ಸ್ಲಿಪ್/ಫಾರ್ಮ್ 16.
ಪ್ರಕಟಿತ ಸಂಶೋಧನಾ ಪ್ರಬಂಧಗಳ ಮುಖಪುಟ ಹಾಗೂ ವಿಷಯ ಪುಟಗಳ ಪ್ರತಿಗಳು.
ಚಾಲ್ತಿ ಸಾಲಿನ (2026-27) ಜಾತಿ/ಮೀಸಲಾತಿ ಪ್ರಮಾಣಪತ್ರ (SC/ST/OBC-NCL/PwBD).
ಸರ್ಕಾರಿ/ಅರೆ-ಸರ್ಕಾರಿ/ವಿಶ್ವವಿದ್ಯಾಲಯಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ನಿರಾಕ್ಷೇಪಣಾ ಪತ್ರ (NOC) ಹಾಗೂ ವಿಜಿಲೆನ್ಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ.
ಗುರುತಿನ ಚೀಟಿ ಪ್ರತಿ (ಆಧಾರ್, ವೋಟರ್ ಐಡಿ ಅಥವಾ ಪಾಸ್‌ಪೋರ್ಟ್).
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಇರುವುದಿಲ್ಲ.
ಅರ್ಜಿಗಳನ್ನು ಶೈಕ್ಷಣಿಕ ಅಂಕಗಳು, ಸಂಶೋಧನಾ ಪ್ರಕಟಣೆಗಳು ಮತ್ತು ಅನುಭವದ ಆಧಾರದ ಮೇಲೆ ಸ್ಕ್ರೀನಿಂಗ್ ಮಾಡಿ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ.
ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



