ಉಪನ್ಯಾಸಕರಿಗೆ ಪ್ರಾಂಶುಪಾಲರಾಗುವ ಸುವರ್ಣಾವಕಾಶ: 247 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ KEA, ವೇತನ ಎಷ್ಟು ಗೊತ್ತಾ?
ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವರಿಗೆ ಇಲ್ಲಿದೆ ಗುಡ್ ನ್ಯೂಸ್. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 247 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು 2026ರ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

KEA Principal Recruitment 2026: ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 247 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು 2026ರ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಗಳ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಯ ಹೆಸರು: ಪ್ರಾಂಶುಪಾಲರು (ಸರ್ಕಾರಿ ಪದವಿ ಪೂರ್ವ ಕಾಲೇಜುಗಳು)
ಒಟ್ಟು ಹುದ್ದಗೆಳು: 247 ಹುದ್ದೆಗಳು
ಸಾಮಾನ್ಯ ವೃಂದ: 216 ಹುದ್ದೆಗಳು
ಕಲ್ಯಾಣ-ಕರ್ನಾಟಕ ವೃಂದ: 31 ಹುದ್ದೆಗಳು
ಅರ್ಹತೆ:
ಸೇವಾವಧಿ ನಿಯಮ: ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಅಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕನಿಷ್ಠ 10 ವರ್ಷಗಳ ನಿಯಮಿತ ಸೇವೆಯನ್ನು ಪೂರ್ಣಗೊಳಿಸಿ, ಪ್ರೊಬೇಷನರಿ ಅವಧಿಯನ್ನು ಯಶಸ್ವಿಯಾಗಿ ಮುಗಿಸಿ ಸದ್ಯ ಸೇವೆಯಲ್ಲಿರುವ ಉಪನ್ಯಾಸಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ವಿಶೇಷ ಸೂಚನೆ: ಇದು ಇಲಾಖೆಯೊಳಗಿನ ಅಭ್ಯರ್ಥಿಗಳಿಗೆ ಸೀಮಿತವಾದ ನೇಮಕಾತಿಯಾಗಿದ್ದು, ಹೊರಗಿನ ಅಥವಾ ಮುಕ್ತ ಮಾರುಕಟ್ಟೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಸಂಬಳ:
₹90,200 – ₹1,59,200 (2024ರ ಪರಿಷ್ಕೃತ ರಾಜ್ಯ ವೇತನ ಶ್ರೇಣಿ).
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ವರ್ಗಗಳು (2A, 2B, 3A, 3B): ₹1,500
SC, ST, ಪ್ರವರ್ಗ-1, ಮಾಜಿ ಸೈನಿಕರು, ತೃತೀಯ ಲಿಂಗಿಗಳು: ₹1,000
ವಿಶೇಷ ಚೇತನ ಅಭ್ಯರ್ಥಿಗಳು: ₹500

KPSC ಇಂದ ಬಂಪರ್ ಉದ್ಯೋಗಾವಕಾಶ: ರಾಜ್ಯ ಲೆಕ್ಕಪರಿಶೋಧನೆ ಇಲಾಖೆಯ 83 ಗ್ರೂಪ್ ಎ, ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 07 ಸೆಪ್ಟೆಂಬರ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 ಅಕ್ಟೋಬರ್ 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 05 ಅಕ್ಟೋಬರ್ 2026
ನೇಮಕಾತಿ ಅಧಿಸೂಚನೆ:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



