SSLC ಪಾಸಾದವರಿಗೆ ಗುಡ್‌ನ್ಯೂಸ್: ಕಾರಾಗೃಹ ಇಲಾಖೆಯಲ್ಲಿ 869 ಹುದ್ದೆಗಳ ಬೃಹತ್ ನೇಮಕಾತಿ, ತಿಂಗಳಿಗೆ ಬರೋಬ್ಬರಿ 76 ಸಾವಿರ ಸಂಬಳ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 869 ಜೈಲರ್, ವಾರ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಬೃಹತ್ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

Karnataka Prisons Department Recruitment 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 869 ಜೈಲರ್, ವಾರ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಬೃಹತ್ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು, ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಅಕ್ಟೋಬರ್ 15, 2026 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಸಂಪೂರ್ಣ ವರದಿ ಇಲ್ಲಿದೆ:
ಹುದ್ದೆಗಳ ವಿವರ:
ಒಟ್ಟು 869 ಹುದ್ದೆಗಳು
ವಾರ್ಡರ್ (ಪುರುಷ): 835 ಹುದ್ದೆಗಳು (RPC - 560, KK - 275)
ಬೋಧಕ ಗ್ರೇಡ್-2: 24 ಹುದ್ದೆಗಳು (RPC - 16, KK - 8)
ಜೈಲರ್: 5 ಹುದ್ದೆಗಳು (KK ವೃಂದ ಮಾತ್ರ)
ವಾರ್ಡರ್ ಕಮ್ ನರ್ಸಿಂಗ್: 5 ಹುದ್ದೆಗಳು (KK ವೃಂದ ಮಾತ್ರ)
ಅರ್ಹತೆ:
ವಿದ್ಯಾರ್ಹತೆ: ವಾರ್ಡರ್, ಬೋಧಕ ಹಾಗೂ ವಾರ್ಡರ್ ಕಮ್ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಜೈಲರ್ ಹುದ್ದೆಗೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಕಡ್ಡಾಯವಾಗಿದೆ.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ತುಂಬಿರಬೇಕು ಮತ್ತು ಗರಿಷ್ಠ 33 ವರ್ಷ ಮೀರಿರಬಾರದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 19 ಸೆಪ್ಟೆಂಬರ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್ 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 16 ಅಕ್ಟೋಬರ್ 2026
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ: 21 ಮತ್ತು 22 ನವೆಂಬರ್ 2026
ಸಂಬಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ₹34,100 ರಿಂದ ಹಿಡಿದು ಗರಿಷ್ಠ ₹1,12,900 ರವರೆಗೆ ಅತ್ಯುತ್ತಮ ವೇತನ ಶ್ರೇಣಿ ಸಿಗಲಿದೆ. (ವಾರ್ಡರ್ ಹುದ್ದೆಗೆ ₹37,500 – ₹76,100 ಇರಲಿದೆ)
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹750
SC/ST, ಪ್ರವರ್ಗ-1 ಅಭ್ಯರ್ಥಿಗಳಿಗೆ ₹500
ಅರ್ಜಿ ಸಲ್ಲಿಕೆ ವಿಧಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣ cetonline.karnataka.gov.in/kea ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸ ಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಹಾಗೂ ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ತಪಾಸಣೆ ಮತ್ತು ಮೂಲ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

Engineering ಪದವೀಧರರಿಗೆ ಗುಡ್‌ನ್ಯೂಸ್: 480 ಇಂಜಿನಿಯರಿಂಗ್ ಸರ್ವೀಸ್ ಹುದ್ದೆಗಳಿಗೆ UPSC ನೇಮಕಾತಿ ಅಧಿಸೂಚನೆ ಪ್ರಕಟ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



