ನಟ ಸಂಜಯ್ ದತ್ ವಿರುದ್ಧ ಪಿಐಎಲ್ ದಾಖಲಿಸಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಕೆಜಿಎಫ್ -2 ಸಿನಿಮಾ ಮತ್ತು ನಟ ಸಂಜಯ್ ದತ್ ವಿರುದ್ಧ ಸಾರ್ನಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಸಂಜಯ್ ದತ್ 1993ರಲ್ಲಿ ನಡೆದ ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಚಾರ್ಜ್‌ಷೀಟ್‌ನಲ್ಲಿ ಅವರ ಹೆಸರಿತ್ತು. ಅದಕ್ಕೆ ಅವರು ಶಿಕ್ಷೆಯನ್ನೂ ಅನುಭವಿಸಿದ್ದರು. 2016ರಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.
ಸಂಜಯ್ ದತ್ ಒಬ್ಬ ದೇಶದ್ರೋಹಿ. ಅವರು ಕರ್ನಾಟಕಕ್ಕೆ ಕಾಲಿಡಬಾರದು. ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಬಾರದು. ಅವರನ್ನು ಈ ಚಿತ್ರದಿಂದಲೇ ಕೈ ಬಿಡಬೇಕು ಎಂದು ಆಗ್ರಹಿಸಿ ಶಿವಶಂಕರ್ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ಕೈಗೆತ್ತಿಗೊಂಡ ಮುಖ್ಯ ನ್ಯಾಯ ಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಅಶೋಕ್ ಎಸ್ ಕಿಣಗಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಅರ್ಜಿದಾರ ಸಲ್ಲಿಸರುವ ಅರ್ಜಿಯಲ್ಲಿ ನಟನ ಸಿನಿಮಾವನ್ನು ನಿಷೇಧಿಸಲು ಸರಿಯಾದ ಕಾರಣಗಳನ್ನು ನೀಡಿಲ್ಲ ಎಂದು ಹೇಳಿರುವ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


