ಸಿನಿಮಾ

ಥಗ್ ಲೈಫ್: ಕರ್ನಾಟಕದಲ್ಲಿ ಚಿತ್ರ ಪ್ರದರ್ಶನಕ್ಕೆ ಬೆದರಿಕೆ, ರಕ್ಷಣೆ ಕೋರಿ ಅರ್ಜಿ, ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ!

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಕರ್ನಾಟಕ ಹೈಕೋರ್ಟ್ ಸಂಪರ್ಕಿಸುವಂತೆ ಕರ್ನಾಟಕ ಥಿಯೇಟರ್ ಅಸೋಸಿಯೇಷನ್ ಗೆ ಸೂಚಿಸಿತು.

ಥಗ್ ಲೈಫ್: ಕರ್ನಾಟಕದಲ್ಲಿ ಚಿತ್ರ ಪ್ರದರ್ಶನಕ್ಕೆ ಬೆದರಿಕೆ,  ರಕ್ಷಣೆ ಕೋರಿ ಅರ್ಜಿ, ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ!
ಥಗ್ ಲೈಫ್ ನಲ್ಲಿ ಕಮಲ್ ಹಾಸನ್
Published On :

ನವದೆಹಲಿ: ಕರ್ನಾಟಕದಲ್ಲಿ ಕಮಲ್‌ಹಾಸನ್‌ ಅಭಿನಯದ ‘ಥಗ್‌ ಲೈಫ್‌’ಚಿತ್ರ ಪ್ರದರ್ಶನಕ್ಕೆ ಬೆದರಿಕೆ ಆರೋಪದ ವಿರುದ್ಧ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಕರ್ನಾಟಕ ಹೈಕೋರ್ಟ್ ಸಂಪರ್ಕಿಸುವಂತೆ ಕರ್ನಾಟಕ ಥಿಯೇಟರ್ ಅಸೋಸಿಯೇಷನ್ ಗೆ ಸೂಚಿಸಿತು.

ಅರ್ಜಿದಾರರ ಪರ ಹಾಜರಾದ ವಕೀಲರು, ಕರ್ನಾಟಕದಲ್ಲಿ ಥಗ್ ಲೈಪ್ ಬಿಡುಗಡೆಯಾದರೆ ಥಿಯೇಟರ್ ಗೆ ಬೆಂಕಿ ಹಚ್ಚಲಾಗುವುದು ಎಂದು ಕೆಲವು ಗುಂಪುಗಳು ಬೆದರಿಕೆಯೊಡ್ಡುತ್ತಿವೆ ಎಂದು ಆರೋಪಿಸಿದರು.

ಆದರೆ, ತುರ್ತಾಗಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಜಸ್ಟಿಸ್ ಮಿಶ್ರಾ ಅವರು, ಅಗ್ನಿ ನಿರೋಧಕ ವ್ಯವಸ್ಥೆ ಸ್ಥಾಪಿಸಿ ಎಂದು ಹೇಳಿದರು. ಅಲ್ಲದೇ, ಹೈಕೋರ್ಟ್ ಸಂಪರ್ಕಿಸಿ ಎಂದು ಅರ್ಜಿದಾರರಿಗೆ ಸೂಚಿಸಿದರು. ಥಗ್ ಲೈಪ್ ಜೂನ್ 5 ರಂದು ಕರ್ನಾಟಕ ಹೊರತುಪಡಿಸಿ ದೇಶಾದ್ಯಂತ ಬಿಡುಗಡೆಯಾಗಿದೆ.

1987 ರ "ನಾಯಕನ್" ನಂತರ ನಿರ್ದೇಶಕ ಮಣಿರತ್ನಂ ಹಾಗೂ ನಟ ಕಮಲ್ ಹಾಸನ್ ಕಾಂಬಿನೇಷನ್ ನಲ್ಲಿ 'ಥಗ್ ಲೈಫ್ ' ಮೂಡಿಬಂದಿದೆ. ಆದರೆ ಈ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಕಮಲ್ ಹಾಸನ್ ಹೇಳಿಕೆ ಸಾಕಷ್ಟು ವಿವಾದಕ್ಕೆ ಗುರಿಯಾದ ನಂತರ ಕರ್ನಾಟಕದಲ್ಲಿ ಬಿಡುಗಡೆಯಾಗಿಲ್ಲ. ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.