ಸಿನಿಮಾ

ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ: 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೈಲಜಾ ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ: 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೈಲಜಾ ನಿಧನ
ನಟಿ ಶೈಲಜಾ ಶ್ರೀಶೈಲನ್ — Online Desk
Published On :

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹಿರಿಯ ನಟ ಶ್ರೀಶೈಲನ್ ಪತ್ನಿಯಾಗಿದ್ದ ಶೈಲಜಾ ದಶಕಗಳ ಕಾಲ ಸ್ಯಾಂಡಲ್‌ವುಡ್ ಮತ್ತು ಕಿರುತೆರೆಯಲ್ಲಿ ಮಿಂಚಿದ್ದಾರೆ.

100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ

ನಟಿ ಶೈಲಜಾ ಶ್ರೀಶೈಲನ್ ಅವರು ಎ, ಉಪ್ಪಿ 2, ಅನಂತನ ಅವಾಂತರ, ಪುಟ್ಟ ಹೆಂಡ್ತಿ, ಗೃಹಪ್ರವೇಶ ಹಾಗೂ ಬಾರೆ ನನ್ನ ಮುದ್ದಿನ ರಾಣಿ ಸೇರಿದಂತೆ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದ್ರಲ್ಲೂ, ರಿಯಲ್ ಸ್ಟಾರ್ ಉಪೇಂದ್ರ ಅವರ ಬಹುತೇಕ ಚಿತ್ರಗಳಲ್ಲಿ ಶೈಲಜಾ ಅವರು ತಾಯಿ ಸೇರಿದಂತೆ ಪ್ರಮುಖ ಪೋಷಕ ಪಾತ್ರಗಳಿಗೆ ಜೀವ ತುಂಬಿ ಜನಪ್ರಿಯತೆ ಗಳಿಸಿದ್ದರು.

ಮುಂದುವರೆದು, ಟಿ. ಎನ್. ಸೀತಾರಾಮ್ ನಿರ್ದೇಶನದ ಅತ್ಯಂತ ಜನಪ್ರಿಯ ಮೆಗಾ ಸೀರಿಯಲ್‌ಗಳಾದ ಮಾಯಾಮೃಗ ಮತ್ತು ಮುಕ್ತ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿ ಮನೆಮಾತಾಗಿದ್ದರು. ಏತನ್ಮಧ್ಯೆ, ಮೃತರು ಪುತ್ರ ಶ್ರೀಕಾಂತ್, ಪುತ್ರಿ ಶ್ರೀವಾಣಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.