ಹಿಂದಿ ಮಹಾಭಾರತ ಧಾರಾವಾಹಿ ನಟಿ ಮೇಲೆ ಹಲ್ಲೆ
ಹಿಂದಿ ಭಾಷೆಯ ಮಹಾಭಾರತ ಧಾರಾವಾಹಿಯಲ್ಲಿ ಪಂಚಪಾಂಡವರಿಗೆ ಪತ್ನಿಯ ಪಾತ್ರ ನಿರ್ವಹಿಸಿದ್ದ ನಟಿ ರೂಪಾ ಗಂಗೂಲಿಯ...

ಕೋಲ್ಕತಾ: ಹಿಂದಿ ಭಾಷೆಯ ಮಹಾಭಾರತ ಧಾರಾವಾಹಿಯಲ್ಲಿ ಪಂಚಪಾಂಡವರಿಗೆ ಪತ್ನಿಯ ಪಾತ್ರ ನಿರ್ವಹಿಸಿದ್ದ ನಟಿ ರೂಪಾ ಗಂಗೂಲಿಯ ಮೇಲೆ ಹಲ್ಲೆಯಾಗಿದೆ ಎಂದು ವರದಿಯಾಗಿದೆ.
ಬಿಜೆಪಿ ಸದಸ್ಯೆ ಹಾಗೂ ಹಿಂದಿ ಭಾಷೆಯಲ್ಲಿ ಮಹಾಭಾರತ ಧಾರಾವಾಹಿಯಲ್ಲಿ ಪಂಚಪಾಂಡವರಿಗೆ ಪತ್ನಿಯ ಪಾತ್ರ ನಿರ್ವಹಿಸಿದ್ದ ನಟಿ ರೂಪಾ ಗಂಗೂಲಿಯ ಮೇಲೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸದಸ್ಯರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ಇತ್ತೀಚೆಗಷ್ಟೆ ರೂಪಾ ಗಂಗೂಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಸ್ಥಳೀಯ ಸಂಸ್ಥೆಯ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.
ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಮಾರಾ-ಮಾರಿ ನಡೆದಿದೆ. ಈ ಸಂಧರ್ಭದಲ್ಲಿ ನನ್ನ ಮೇಲೆ ಟಿಎಂಸಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ರೂಪ ಗಂಗೂಲಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


