ಬಿಗ್ ಬಾಸ್ ಹೊಸ ಆವೃತ್ತಿಗೆ ಮತ್ತೆ ಸಲ್ಮಾನ್ ಸಾರಥಿ
ಹಿಂದಿ ರಿಯಾಲಿಟಿ ಕಾರ್ಯಕ್ರಮ ಬಿಗ್ ಬಾಸ್ ೯ ನೆ ಆವೃತ್ತಿಗೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತೆ ಸಾರಥ್ಯ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕರಾಚಿ: ಹಿಂದಿ ರಿಯಾಲಿಟಿ ಕಾರ್ಯಕ್ರಮ ಬಿಗ್ ಬಾಸ್ ೯ ನೆ ಆವೃತ್ತಿಗೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತೆ ಸಾರಥ್ಯ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಬಿಗ್ ಬಾಸ್ ಕಾರ್ಯಕ್ರಮದ ೮ ನೆ ಆವೃತ್ತಿಯ ಕೊನೆಗೆ ೪೯ ವರ್ಷದ ನಟ ಮುಂದಿನ ಆವೃತಿಯನ್ನು ನಡೆಸಿಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರಿಂದ ಕಲರ್ಸ್ ಟಿವಿ ವಾಹಿಸಿ ಅಕ್ಷಯ್ ಕುಮಾರ್ ಮತ್ತು ರಣವೀರ್ ಸಿಂಗ್ ಅವರನ್ನು ಈ ಕೆಲಸಕ್ಕೆ ಕೇಳಿಕೊಂಡಿತ್ತು ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿತ್ತು.
ಆದರೆ ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ ದಬಾಂಗ್ ನಟ ತಮ್ಮ ಈ ಮೊದಲ ನಿಲುವಿನಿಂದ ಹಿಂದೆ ಸರಿದಿದ್ದು, ಟಿವಿ ವಾಹಿನಿ ಮತ್ತು ನಟನ ಮಧ್ಯೆ ಹೊಸ ಒಪ್ಪಂದಗಳಿಗೆ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.
ಸಲ್ಮಾನ್ ಖಾನ್ ಅವರು ಬಿಡುವಾಗಿರುವ ದಿನಾಂಕಕ್ಕೆ ಟಿವಿ ವಾಹಿನಿ ಈ ಕಾರ್ಯಕ್ರಮವನ್ನು ಮತ್ತೆ ಪ್ರಾರಂಭಿಸಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


