ಅವಧಿಗೂ ಮುನ್ನ ನಟ ಸಂಜಯ್ ದತ್ ಜೈಲಿನಿಂದ ಬಿಡುಗಡೆ?
ಬಾಲಿವುಡ್ ನಟ ಸಂಜಯ್ ದತ್ ಅವಧಿಗೂ ಮುನ್ನ ಅಂದರೆ ಆರು ತಿಂಗಳು ಮೊದಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ...

ಮುಂಬಯಿ: 1993ರ ಮುಂಬಯಿ ಸರಣಿ ಬಾಂಬ್ ಸ್ಫೋಟ ಆರೋಪದಲ್ಲಿ ಜೈಲುವಾಸ ಅನುಭವಿಸುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಅವಧಿಗೂ ಮುನ್ನ ಅಂದರೆ ಆರು ತಿಂಗಳು ಮೊದಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪುಣೆಯ ಯೆರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸಂಜಯ್ ದತ್, ಸನ್ನಡತೆ ಆಧಾರದ ಮೇಲೆ ಆರು ತಿಂಗಳು ಮೊದಲೇ ಬಿಡುಗಡೆಯಾಗಲಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಅಪರಾಧಿಯು ತನ್ನ ಜೈಲು ಶಿಕ್ಷೆ ವೇಳೆ ಉತ್ತಮ ನಡತೆ ತೋರಿದರೆ ಅಂಥ ಖೈದಿಗೆ 114 ದಿನಗಳು ಶಿಕ್ಷೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಂಜಯ್ ದತ್ ಅವರ ಎಲ್ಲ ದಾಖಲೆಗಳನ್ನು ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


