ಬಾಲಿವುಡ್

ಶೀಘ್ರದಲ್ಲೇ ದೀಪಿಕಾ ಪಡುಕೋಣೆ, ರಣ್ವೀರ್ ನಿಶ್ಚಿತಾರ್ಥ?

ಬಾಲಿವುಡ್ ನಟಿ ದೀಪಿಕಾ ಹಾಗೂ ರಣ್ ವೀರ್ ಸಿಂಗ್ ಪರಸ್ಪರ ಪ್ರೀತಿಸುತ್ತಿರುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆದ್ರೆ ಈ ಜೋಡಿ ಇದೀಗ ತಮ್ಮ ಪ್ರೀತಿಗೆ ನಿಜವಾದ ಅರ್ಥ ...

ಶೀಘ್ರದಲ್ಲೇ ದೀಪಿಕಾ ಪಡುಕೋಣೆ, ರಣ್ವೀರ್ ನಿಶ್ಚಿತಾರ್ಥ?
ದೀಪಿಕಾ ಪಡುಕೋಣೆ ಹಾಗೂ ರಣ್ ವೀರ್ ಸಿಂಗ್
Published On :

ಬಾಲಿವುಡ್ ನಟಿ ದೀಪಿಕಾ ಹಾಗೂ ರಣ್ ವೀರ್ ಸಿಂಗ್ ಪರಸ್ಪರ ಪ್ರೀತಿಸುತ್ತಿರುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆದ್ರೆ ಈ ಜೋಡಿ ಇದೀಗ ತಮ್ಮ ಪ್ರೀತಿಗೆ ನಿಜವಾದ ಅರ್ಥ ನೀಡೋದಕ್ಕೆ ಮುಂದಾಗಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.

ದೀಪಿಕಾ ಹಾಗೂ ರಣ್ವೀರ್ ಮದುವೆಯಾಗಲು ನಿರ್ಧರಿಸಿದ್ದು, ಈ ವಿಷಯವನ್ನು ಅಧಿಕೃತವಾಗಿ ಸಾರ್ವಜನಿಕವಾಗಿ ಘೋಷಿಸಲು ನಿರ್ಧರಿಸಿದ್ದಾರೆ. 2016 ರ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ದೀಪಿಕಾಳನ್ನು ಮದುವೆಯಾಗಲು ರಣ್ವೀರ್ ಮನೆಯಲ್ಲಿ ಯಾವುದೇ ವಿರೋಧಗಳಿಲ್ಲ, ಆದರೆ ದೀಪಿಕಾ ಪೋಷಕರು ವಿವಾಹಕ್ಕೆ ಸ್ವಲ್ಪ ಹಿಂದೇಟು ಹಾಕುತ್ತಿದ್ದು ಈಗ ಒಪ್ಪಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ಎರಡು ಕುಟುಂಬಗಳು ನಿಶ್ಚಿತಾರ್ಥದ ಸಿದ್ಧತೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.