'ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರ ನಿಷೇಧ ನಿರ್ಧಾರ ಸರಿಯಲ್ಲ: ಅನುಷ್ಕಾ ಶರ್ಮಾ
ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ ಒಳಗೊಂಡಿರುವ ಬಿಬಿಸಿಯ ವಿವಾದಾತ್ಮಕ 'ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರವನ್ನು ಭಾರತದಲ್ಲಿ ಪ್ರಸಾರ...

ನವದೆಹಲಿ: ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ ಒಳಗೊಂಡಿರುವ ಬಿಬಿಸಿಯ ವಿವಾದಾತ್ಮಕ 'ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡದಂತೆ ನಿಷೇಧ ಹೇರಿರುವ ಕುರಿತಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಕ್ಷ್ಯ ಚಿತ್ರ ನಿಷೇಧ ನಿರ್ಧಾರ ಸರಿಯಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ಬಾಲಿವುಡ್ ನ ಹಲವಾರು ನಟ- ನಟಿಯರು ಬಿಬಿಸಿ ಯ ಲೆಸ್ಲಿ ಉಡ್ವಿನ್ ನಿರ್ಮಿಸಿದ್ದ 'ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದಕ್ಕೆ ತಮ್ಮ ವಿರೋಧ ವ್ಯಕ್ತಪಡಿಸಿದ್ದು, ಈಗ ಅನುಷ್ಕಾ ಶರ್ಮಾ ಕೂಡಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ಮೂಲಕ ಆ ಸಾಲಿಗೆ ಸೇರಿದ್ದಾರೆ.
ತಮ್ಮ ಚೊಚ್ಚಲ ಸಿನಿಮಾ ನಿರ್ಮಾಣದ ಎನ್ ಎಚ್ 10 ಥ್ರಿಲ್ಲರ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಅನುಷ್ಕಾ ಶರ್ಮಾ ಅವರು. ಇಂಡಿಯಾಸ್ ಡಾಟರ್ ಸಾಕ್ಷ್ಯ ಚಿತ್ರ ನಿಷೇಧ ಕುರಿತಂತೆ ಮಾತನಾಡಿದ್ದು, ಚಿತ್ರವನ್ನು ನೋಡುವುದು ಬಿಡುವುದು ಜನತೆಗೆ ಬಿಟ್ಟಿದ್ದು, ಯಾವುದನ್ನು ನೋಡಬೇಕು, ಯಾವುದನ್ನು ನೋಡಬಾರದೆಂಬುದು ಜನರಿಗೆ ಗೊತ್ತಿದೆ. ಸಾಕ್ಷ್ಯಚಿತ್ರಕ್ಕೆ ನಿಷೇಧ ಹೇರುವ ಬದಲು ಈ ಕುರಿತ ತೀರ್ಮಾನವನ್ನು ಜನರಿಗೆ ಬಿಡಬೇಕಿತ್ತು ಎಂದು ಹೇಳಿದ್ದಾರೆ.
ದೆಹಲಿ ಅತ್ಯಾಚಾರ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ನ ಸಂದರ್ಶನ ಒಳಗೊಂಡಿರುವ ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರಸಾರ ಮಾಡದಂತೆ ಬಿಬಿಸಿಗೆ ಸರ್ಕಾರ ಹಾಗೂ ನ್ಯಾಯಾಂಗ ಸೂಚನೆ ನೀಡಿತ್ತು. ಸಾಕ್ಷ್ಯಚಿತ್ರದಲ್ಲಿ ಅತ್ಯಾಚಾರಕ್ಕೊಳಗಾದ ನಿರ್ಭಯಾ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಅಂಶಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿತ್ತು. ಹೀಗಾಗಿ ನಿರ್ಮಾಪಕಿ ಲೆಸ್ಲಿ ಉಡ್ವಿನ್ ಅವರ 'ಇಂಡಿಯಾಸ್ ಡಾಟರ್' ಸಾಕ್ಷ್ಯಚಿತ್ರಕ್ಕೆ ದೇಶಾದ್ಯಂತ ನಿಷೇಧ ಹೇರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


