ಸೈಫ್ ಅಲಿಖಾನ್ 'ಪದ್ಮ ಶ್ರೀ' ವಾಪಸ್..?
ಬಾಲಿವುಡ್ ನ ಛೋಟಾ ನವಾಬ್ ಸೈಫ್ ಅಲಿ ಖಾನ್ ಗೆ ಕೇಂದ್ರ ಸರ್ಕಾರ ನೀಡಿದ್ದ ಪದ್ಮ ಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆದುಕೊಳ್ಳುವ..

ಮುಂಬೈ: ಬಾಲಿವುಡ್ ನ ಛೋಟಾ ನವಾಬ್ ಸೈಫ್ ಅಲಿ ಖಾನ್ ಗೆ ಕೇಂದ್ರ ಸರ್ಕಾರ ನೀಡಿದ್ದ ಪದ್ಮ ಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಮುಂಬೈನ ತಾಜ್ ಹೊಟೆಲ್ ನಲ್ಲಿ ಭಾರತೀಯ ಮೂಲದ ವಿದೇಶಿ ಪ್ರಜೆಯೊಬ್ಬರೊಂದಿಗೆ ಜಗಳ ಮಾಡಿಕೊಂಡಿದ್ದ ಸೈಫ್ ಅವರೊಂದಿಗೆ ಹೊಡೆದಾಟ ಕೂಟ ನಡೆಸಿದ್ದರು. ಈ ಸಂಬಂಧ ಸೈಫ್ ವಿರುದ್ಧ ಎಫ್ ಐರ್ ಕೂಡ ದಾಖಲಾಗಿದ್ದು, ಇದೇ ಪ್ರಕರಣ ಇದೀಗ ಸೈಫ್ ಅಲಿಖಾನ್ ಅವರ ಪದ್ಮ ಶ್ರೀ ಪ್ರಶಸ್ತಿಗೂ ತೊಡಕುಂಟಾಗಿದೆ. ಇದೇ ವಿಷಯವನ್ನು ಆಧಾರವಾಗಿಟ್ಟುಕೊಂಡು ಆರ್ ಟಿಐ ಕಾರ್ಯಕರ್ತರೊಬ್ಬರು ಪದ್ಮಶ್ರೀ ಹಿಂಪಡೆಯಬಾರದೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಆರ್ ಟಿಐ ಕಾರ್ಯಕರ್ತ ಸುಭಾಷ್ ಅಗರವಾಲ್ ಎಂಬುವರು ಆಗಸ್ಟ್ 20, 2014ರಂದು ಗೃಹ ಸಚಿವಾಲಯಕ್ಕೆ ಬರೆದಿರುವ ಪತ್ರ ಸಂಖ್ಯೆ 1/3112014 ನಲ್ಲಿ ಸೈಫ್ ಅಲಿ ಖಾನ್‌ಗೆ ನೀಡಿರುವ ಪದ್ಮ ಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂದು ಆರ್‌ಟಿಐ ಕಾರ್ಯಕರ್ತ ಮನವಿ ಮಾಡಿದ್ದಾರೆ.
ಇತ್ತ ವಿದೇಶಿ ಪ್ರಜೆಯೊಬ್ಬರಿಗೆ ಗೂಸಾ ಕೊಟ್ಟ ತಪ್ಪಿಗೆ ನಟ ಸೈಫ್ ಅಲಿ ಖಾನ್ ಅವರಿಗೆ ನೀಡಲಾಗಿರುವ ಪದ್ಮ ಶ್ರೀ ಪ್ರಶಸ್ತಿಯನ್ನು ಹಿಂಪಡೆಯಲು ಎನ್ ಡಿಎ ಸರ್ಕಾರ ಮುಂದಾಗಿದೆ ಎಂಬ ವರದಿ ಬಂದಿದೆ. ಆರ್ ಟಿಐ ಅರ್ಜಿ ನಂತರ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ ಮುಂಬೈ ಪೊಲೀಸರನ್ನು ಕೇಂದ್ರ ಗೃಹ ಸಚಿವಾಲಯ ಕೇಳಿದೆ. ಈ ವರದಿ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?
ತಾಜ್ ಹೋಟೆಲಿನ ವಸಾಬಿ ರೆಸ್ಟೋರೆಂಟ್‌ನಲ್ಲಿ 2012 ಫೆಬ್ರವರಿ 22ರಂದು ರಾತ್ರಿ ಭೋಜನ ಕೂಟದಲ್ಲಿ ಸೈಫ್ ತಮ್ಮ ಭಾವಿ ಪತ್ನಿ ಕರೀನಾ ಜೊತೆ ಪಾಲ್ಗೊಂಡಿದ್ದರು. ಈ ವೇಳೆ ಸೈಫ್ ಹೋಟೆಲ್ ನಲ್ಲಿ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಇಕ್ಬಾಲ್ ಶರ್ಮಾ ಎಂಬ ಅನಿವಾಸಿ ಭಾರತೀಯ ಉದ್ಯಮಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಮಾತಿಗೆ ಮಾತು ಬೆಳೆದು ಶರ್ಮಾ ಮುಖಕ್ಕೆ ಸೈಫ್ ಪಂಚ್ ಕೊಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟಿನಲ್ಲಿ ಸೈಫ್ ವಿರುದ್ಧ ಚಾರ್ಜ್ ಶೀಟ್ ಕೂಡ ಹಾಕಲಾಗಿತ್ತು. 2010ರಲ್ಲಿ ಸೈಫ್ ಅಲಿ ಖಾನ್ ಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


