ಬಾಲಿವುಡ್

ನಟ ಶಶಿಕಪೂರ್ ಗೆ ಮನೆಯಲ್ಲೇ ಪ್ರಶಸ್ತಿ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಬಾಲಿವುಡ್ ಹಿರಿಯ ನಟ ಶಶಿ ಕಪೂರ್(77) ತೀವ್ರ ಅನಾರೋಗ್ಯದಿಂದಾಗಿ ಹಾಸಿಗೆ...

ನಟ ಶಶಿಕಪೂರ್ ಗೆ ಮನೆಯಲ್ಲೇ ಪ್ರಶಸ್ತಿ
ಬಾಲಿವುಡ್ ಹಿರಿಯ ನಟ ಶಶಿ ಕಪೂರ್
Published On :

ನವದೆಹಲಿ: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಬಾಲಿವುಡ್ ಹಿರಿಯ ನಟ ಶಶಿ ಕಪೂರ್(77) ತೀವ್ರ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿರುವ ಕಾರಣ, ಅವರ ಮನೆಯಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕಿಡ್ನಿ ವೈಫಲ್ಯ ಸಮಸ್ಯೆ ಯಿಂದ ಬಳಲುತ್ತಿರುವ ಶಶಿಕಪೂರ್ ಮುಂಬೈಯಿಂದ ದೆಹಲಿಗೆ ಹೋಗಿ ಪ್ರಶಸ್ತಿ ಸ್ವೀಕರಿಸುವುದು ದುಸ್ತರ ಎಂದು ಕುಟುಂಬದ ಮೂಲಗಳು ತಿಳಿಸಿರುವುದರಿಂದ, ಸಚಿವ ಅರುಣ್ ಜೈಟ್ಲಿ ಅಥವಾ ರಾಜವರ್ಧನ್ ರಾಥೋಡ್ ಕಪೂರ್ ಮನೆಯಲ್ಲೇ ಗೌರವಪ್ರದಾನ ಮಾಡಲಿದ್ದಾರೆ. ಆ ಸಂದರ್ಭದಲ್ಲಿ ಕಪೂರ್ ಕುಟುಂಬ ಸದಸ್ಯರು ಉಪಸ್ಥಿತರಿರಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.