ಬಾಲಿವುಡ್ ನಟ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ
ಬಾಲಿವುಡ್ ಸಿಂಗಂ ನಟ ಅಜಯ್ ದೇವಗನ್ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು.

ಬಾಲಿವುಡ್ ಸಿಂಗಂ ನಟ ಅಜಯ್ ದೇವಗನ್ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿದ ಅಭಿಮಾನಿಗಳು ಫುಲ್ ಖುಷಿಯಾದರು. ಕೆಲವರು ಅಜಯ್ ದೇವಗನ್ ಜೊತೆ ಸೆಲ್ಫೀ ತೆಗೆದು ಕೊಂಡರೇ ಮತ್ತೆ ಕೆಲವರು ಆಟೋಗ್ರಾಫ್ ಹಾಕಿಸಿಕೊಂಡರು.
ಅಜಯ್ ದೇವಗನ್ ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ಹಲವು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಒಂದು ರಾತ್ರಿ ಪೂರ್ತಿ ಕುಕ್ಕೆ ಸುಬ್ರಮಣ್ಯದ ಹೋಟೆಲ್ ನಲ್ಲಿ ಅಜಯ್ ದೇವಗನ್ ತಂಗಿದ್ದರು.
ಇನ್ನು ಅಜಯ್ ದೇವಗನ್ ಶಿವಾಯ್ ಚಿತ್ರ ನಿರ್ದೇಶಿಸುತ್ತಿದ್ದೂ, ಅದಕ್ಕಾಗಿ ಕುಕ್ಕೆ ಸುಬ್ರಮಣ್ಯ ದೇವರ ಸನ್ನಿಧಿಯಲ್ಲಿ ಪೂಜೆ ನೆರವೇರಿಸುವಂತೆ ಅಜಯ್ ದೇವಗನ್ ಅವರಿಗೆ ತಮ್ಮ ಸ್ನೇಹಿತರೊಬ್ಬರು ಸಲಹೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕುಕ್ಕೆ ದೇವಾಲಯದಲ್ಲಿ ಹಲವು ಪೂಜೆಗಳನ್ನು ನೆರವೇರಿಸಲಾಯ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


