ಧೋನಿ ತಂದೆ ಪಾತ್ರದಲ್ಲಿ ಅನುಪಮ್ ಖೇರ್
ಟೀಂ ಇಂಡಿಯಾದ ನಾಯಕ ಎಂಎಸ್ ಧೋನಿ ಅವರ ತಂದೆ ಪಾತ್ರದಲ್ಲಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್...

Published On :
ಮುಂಬೈ: ಟೀಂ ಇಂಡಿಯಾದ ನಾಯಕ ಎಂಎಸ್ ಧೋನಿ ಅವರ ತಂದೆ ಪಾತ್ರದಲ್ಲಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಕಾಣಿಸಿಕೊಳ್ಳಲಿದ್ದಾರೆ.
ಹೌದು, ಎಂಎಸ್ ಧೋನಿ ಜೀವನಾಧಾರಿತ ಚಲನಚಿತ್ರದಲ್ಲಿ ಅನುಪಮ್ ಖೇರ್ ಅವರನ್ನು ಧೋನಿ ಅವರ ತಂದೆ ಪಾನ್ ಸಿಂಗ್ ಅವರ ಪಾತ್ರ ನಿರ್ವಹಿಸಲು ಆಯ್ಕೆ ಮಾಡಲಾಗಿದೆ ಎಂದು ಟ್ವಿಟರ್ ನಲ್ಲಿ ಬಹಿರಂಗಗೊಂಡಿದೆ.
ಇನ್ನು ಧೋನಿ ಪಾತ್ರವನ್ನು ಸುಶಾಂತ ಸಿಂಗ್ ಹಾಗೂ ಧೋನಿ ಪತ್ನಿ ಸಾಕ್ಷಿ ಪಾತ್ರವನ್ನು ಕಿಯಾರ ಅದ್ವಾನಿ ಅವರು ಮಾಡಲಿದ್ದಾರೆ. ಈಗಾಗಲೇ ಚಿತ್ರೀಕರಣಕ್ಕೆ ನಿರ್ದೇಶಕರು ಬಾರಿ ತಯಾರಿ ಮಾಡಿಕೊಂಡಿದ್ದು, ನ್ಯಾಯ ಒದಗಿಸುವ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದಾರೆ ಎನ್ನಬಹುದು. ಅಂತೂ ಚಿತ್ರೀಕರಣಕ್ಕೂ ಮುನ್ನ ಎಂಎಸ್ ಧೋನಿ ಜೀವನಾಧಾರಿತ ಚಲನಚಿತ್ರ ಭಾರಿ ಸುದ್ದಿ ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


