ಬಾಲಿವುಡ್

ಐಸಿಯುನಿಂದ ದಿಲೀಪ್ ಕುಮಾರ್ ಸ್ಥಳಾಂತರ, ಆರೋಗ್ಯದಲ್ಲಿ ಚೇತರಿಕೆ: ಪತ್ನಿ ಸಾಯಿರಾ ಬಾನು

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಅಭಿಮಾನಿಗಳು ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು...

ಐಸಿಯುನಿಂದ ದಿಲೀಪ್ ಕುಮಾರ್ ಸ್ಥಳಾಂತರ, ಆರೋಗ್ಯದಲ್ಲಿ ಚೇತರಿಕೆ: ಪತ್ನಿ ಸಾಯಿರಾ ಬಾನು
ಸಾಯಿರಾ ಬಾನು - ದಿಲೀಪ್ ಕುಮಾರ್
Published On :
ಮುಂಬೈ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಅಭಿಮಾನಿಗಳು ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಶನಿವಾರ ಅವರ ಪತ್ನಿ ಸಾಯಿರಾ ಬಾನು ಅವರು ಸ್ಪಷ್ಟಪಡಿಸಿದ್ದಾರೆ. 
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ದಿಲೀಪ್ ಕುಮಾರ್ ಅವರನ್ನು ಇಂದು ಬೆಳಗ್ಗೆ  ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಕೂಡ ಆತಂಕ ವ್ಯಕ್ತ ಪಡಿಸಿ, ಮುಂದಿನ 72 ಗಂಟೆ ನಿರ್ಣಾಯಕ ಎಂದು ಹೇಳಿದ್ದರು. ಆದರೆ ದಿಲೀಪ್ ಕುಮಾರ್ ಚಿಕಿತ್ಸೆೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಅವರನ್ನು ತೀವ್ರ ನಿಗಾ ಘಟಕದಿಂದ ಸಾಮಾನ್ಯ ಕೋಣೆಗೆ ವರ್ಗಾಯಿಸಲಾಗಿದೆ ಎಂದು ಸಾಯಿರಾ ಬಾನು ತಿಳಿಸಿದ್ದಾರೆ.
ನ್ಯೂಮೋನಿಯಾದಿಂದ ಬಳಲುತ್ತಿರುವ ದಿಲೀಪ್ ಕುಮಾರ್ ಅವರ ದೇಹದಲ್ಲಿ ಬಿಳಿರಕ್ತ ಕಣಗಳ ಪ್ರಮಾಣ ಕಡಿಮೆ ಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯ ಡಾ. ಜಲೀಲ್ ಪರಿಕ್ಕರ್ ಹೇಳಿದ್ದಾರೆ.
93 ವರ್ಷ ವಯಸ್ಸಿನ ದಿಲೀಪ್ ಕುಮಾರ್ ಅವರಿಗೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸತತ ಆರು ದಶಕಗಳ ಕಾಲ ಬಾಲಿವುಡ್ ನಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಅಭಿಮಾನಿಗಳ ಹೃದಯ ಗೆದ್ದಿದ್ದ ದಿಲೀಪ್ ಕುಮಾರ್, ಮಧುಮತಿ, ದೇವದಾಸ್, ಮೊಗಲ್-ಇ ಅಜಮ್, ಸೇರಿದಂತೆ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.