ಬಾಲಿವುಡ್

ಬಾಲಿವುಡ್ ನಟ ಸಂಜಯ್ ದತ್ ಗೆ ಗುರುವಾರ ಬಿಡುಗಡೆ ಭಾಗ್ಯ

ಪುಣೆಯ ಯರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ನಟ ಸಂಜಯ್ ದತ್ ಅವರನ್ನು ಸನ್ನಡತೆ ಆಧಾರದ ಮೇಲೆ ಗುರುವಾರ ಬಿಡುಗಡೆಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಬಾಲಿವುಡ್ ನಟ ಸಂಜಯ್ ದತ್ ಗೆ ಗುರುವಾರ ಬಿಡುಗಡೆ ಭಾಗ್ಯ
ಸಂಜಯ್ ದತ್
Published On :

ಪುಣೆ: 1993ರ ಮುಂಬೈ ಸರಣಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಪುಣೆಯ ಯರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ನಟ ಸಂಜಯ್ ದತ್ ಅವರನ್ನು ಸನ್ನಡತೆ ಆಧಾರದ ಮೇಲೆ ಗುರುವಾರ ಬಿಡುಗಡೆಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

56 ವರ್ಷದ ಸಂಜಯ್ ದತ್ ಕಳೆದ 5 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದರು. ಗುರುವಾರ ಬೆಳಗ್ಗೆ 9 ಗಂಟೆಗೆ ಜೈಲಿನಿಂದ ಬಿಡುಗಡೆಗೊಳ್ಳುವ ಸಂಜಯ್ ದತ್ ಅವರನ್ನು ಅವರ ಪತ್ನಿ ಹಾಗೂ ಮಕ್ಕಳು ಸ್ವಾಗತಿಸಲಿದ್ದಾರೆ.

ಸಂಜಯ್ ದತ್ ಬಿಡುಗಡೆಯಾಗುವ ದಿನ ಅಭಿಮಾನಿಗಳಿಗಾಗಿ ಜೈಲಿನ ಆವರಣದಲ್ಲಿ ಸಣ್ಣದೊಂದು ಕಾರ್ಯಕ್ರಮ ನಡೆಸಲು ಅನುಮಿತ ನೀಡುವಂತೆ ದತ್ ಕುಟುಂಬ ಪೊಲೀಸ್ ಇಲಾಖೆಗೆ ಮನವಿ ಮಾಡಿತ್ತು. ಆದರೆ ಭದ್ರತೆ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.