ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೇ ಮೌನವಾಗಿರುವುದು: ಶಾರೂಖ್ ಖಾನ್
ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿ ಕಳೆದ ವರ್ಷ ದೇಶದಲ್ಲಿ ಬಿರುಗಾಳಿ ಎಬ್ಬಿಸಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ...

ಮುಂಬಯಿ: ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿ ಕಳೆದ ವರ್ಷ ದೇಶದಲ್ಲಿ ಬಿರುಗಾಳಿ ಎಬ್ಬಿಸಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
'ಫ್ಯಾನ್' ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಶಾರುಖ್ ಬಹಳ ಎಚ್ಚರಿಕೆಯಿಂದ ಮಾತನಾಡಿದ್ದಾರೆ.ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ ನಂತರದ ಅನುಭವ ಹೇಗಿತ್ತು ಎಂದು ಅವರನ್ನು ಪ್ರಶ್ನಿಸಿದಾಗ, 'ಈ ಬಗ್ಗೆ ನಾನು ಮಾತನಾಡುವುದಿಲ್ಲ. ಮೌನವಾಗಿ ಇರುವುದೂ ಅಭಿವ್ಯಕ್ತಿ ಸ್ವಾತಂತ್ರ್ಯ,' ಎಂದಿದ್ದಾರೆ.
ಕಳೆದ ವರ್ಷ ನವೆಂಬರ್‌ನಲ್ಲಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ನಟ,'ದೇಶದಲ್ಲಿ ಅಸಹಿಷ್ಣುತೆ ಮಿತಿ ಮೀರಿದೆ. ಅಸಹಿಷ್ಣುತೆ ಹೆಚ್ಚುತ್ತಲೇ ಇದೆ ಎಂಬ ಭಾವನೆ ಮೂಡಿದೆ,'ಎಂದಿದ್ದರು. ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಗುರಿಯಾಗಿತ್ತು. ಬಿಜೆಪಿಯ ಹಲವು ಸದಸ್ಯರು ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದರು. ನಟನ 'ದಿಲ್‌ವಾಲೆ' ಚಿತ್ರಕ್ಕೂ ಪ್ರತಿಭಟನೆಯ ಬಿಸಿ ತಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


