ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಆಸಿನ್
2008ರಲ್ಲಿ ತೆರೆಕಂಡ ಘಜನಿ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ದಕ್ಷಿಣ ಭಾರತದ ಖ್ಯಾತ ನಟಿ, ಮಲೆಯಾಳಿ ಬೆಡಗಿ ಆಸಿನ್ ತೊಟ್ಟುಮಾಕಳ್ ಅವರು...

Published On :
ನವದೆಹಲಿ: 2008ರಲ್ಲಿ ತೆರೆಕಂಡ ಘಜನಿ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ದಕ್ಷಿಣ ಭಾರತದ ಖ್ಯಾತ ನಟಿ, ಮಲೆಯಾಳಿ ಬೆಡಗಿ ಆಸಿನ್ ತೊಟ್ಟುಮಾಕಳ್ ಅವರು ಮೈಕ್ರೋಮ್ಯಾಕ್ಸ್ ಕಂಪನಿಯ ಸಹ ಸಂಸ್ಥಾಪಕ ರಾಹುಲ್ ಶರ್ಮಾ ಅವರೊಂದಿಗೆ ಮಂಗಳವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಇಂದು ದೆಹಲಿಯ ರೆಸಾರ್ಟ್‌ವೊಂದರಲ್ಲಿ ಆಸೀನ್ ಮತ್ತು ರಾಹುಲ್ ಕ್ರೈಸ್ತ ಸಂಪ್ರದಾಯದಂತೆ ವಿವಾಹವಾದರು. ಕುಟುಂಬ ಸದಸ್ಯರು ಹಾಗೂ ಕೆಲವು ಆಪ್ತ ಸ್ನೇಹಿತರು ಮಾತ್ರ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ಕಳೆದ ಕೆಲವು ವರ್ಷಗಳಿಂದ ರಾಹುಲ್ ಹಾಗೂ ಆಸಿನ್ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದಾರೆ.
30 ವರ್ಷ ವಯಸ್ಸಿನ ಆಸೀನ್ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ನಟಿಸಿದ್ದ ‘ಗಜನಿ’ ಜನಪ್ರಿಯ ಚಿತ್ರವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


