ವಿವಾದಿತ ಬಾಬ್ರಿ ಮಸೀದಿ ಧ್ವಂಸ ಕುರಿತಾದ ಚಿತ್ರದಲ್ಲಿ ಅಜಯ್ ದೇವಗನ್ ನಟನೆ?
ತೆಲುಗಿನ ಬಾಹುಬಲಿ ಮತ್ತು ಹಿಂದಿಯ ಭಜರಂಗಿ ಭಾಯಿಜಾನ್ ನಂತ ಬ್ಲಾಕ್ ಬಸ್ಟರ್ ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್ ಅವರು ಇದೀಗ ಬಾಬ್ರಿ ಮಸೀದಿ...

ಮುಂಬೈ: ತೆಲುಗಿನ ಬಾಹುಬಲಿ ಮತ್ತು ಹಿಂದಿಯ ಭಜರಂಗಿ ಭಾಯಿಜಾನ್ ನಂತ ಬ್ಲಾಕ್ ಬಸ್ಟರ್ ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್ ಅವರು ಇದೀಗ ಬಾಬ್ರಿ ಮಸೀದಿ ಧ್ವಂಸದ ಕುರಿತು ಕಥೆ ಬರೆಯುತ್ತಿದ್ದು ಆ ಚಿತ್ರದಲ್ಲಿ ನಾಯಕ ನಟನಾಗಿ ಅಜಯ್ ದೇವಗನ್ ನಟಿಸುವ ಸಾಧ್ಯತೆ ಇದೆ.
1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಮೇಲೆ ಕೆಲ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಅಂದಿನಿಂದ ಬಾಬ್ರಿ ಮಸೀದಿ ಬಹು ವಿವಾದಿತ ವಿಷಯವಾಗಿದ್ದರಿಂದ ಕಥೆ ಬರೆದು ನಿರ್ದೇಶನಕ್ಕೆ ಸ್ವತಃ ವಿಜಯೇಂದ್ರ ಪ್ರಸಾದ್ ಅವರೇ ಮುಂದಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಚಿತ್ರವನ್ನು ಸೆನ್ಸಾರ್ ಬೋರ್ಡ್ ಅಧ್ಯಕ್ಷ ಪಂಕಜ್ ನಿಹಲಾನಿ ಅವರು ನಿರ್ಮಿಸಲಿದ್ದಾರಂತೆ.
ಚಿತ್ರಕ್ಕೆ ಕಬೀರ್ ಎಂದು ಶೀರ್ಷಿಕೆ ಇಡಲಾಗಿದೆ. ಬಾಬ್ರಿ ಮಸೀದಿ ಧ್ವಂಸದ ಬಳಿಕ ಎದ್ದಿದ್ದ ಹಿಂಸಾಚಾರ ತಡೆಯಲು ಯತ್ನಿಸುವ ವ್ಯಕ್ತಿಯೊರ್ವನ ಕುರಿತಾದ ಕಥೆಯಂತೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


