ಸಾಮಾಜಿಕ ಮಾಧ್ಯಮಗಳು ರಾಕ್ಷಸರಂತೆ ವರ್ತಿಸುತ್ತವೆ: ಅನುಷ್ಕಾ ಆಕ್ರೋಶ
ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ ಕೊಹ್ಲಿ ವಿಚಾರವಾಗಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಹಲವು ಬಾರಿ ಸಾಮಾಜಿಕ ಮಾಧ್ಯಮಗಳಿಗೆ...

Published On :
ನವದೆಹಲಿ: ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ ಕೊಹ್ಲಿ ವಿಚಾರವಾಗಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಹಲವು ಬಾರಿ ಸಾಮಾಜಿಕ ಮಾಧ್ಯಮಗಳಿಗೆ ಆಹಾರವಾಗಿದ್ದಾರೆ. ಸಾಮಾಜಿಕ ತಾಣಗಳಲ್ಲಿ ತಮ್ಮನ್ನು ನಿಂದಿಸಿದ್ದಕ್ಕೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ನಟಿ, ಸಾಮಾಜಿಕ ಮಾಧ್ಯಮಗಳು ರಾಕ್ಷಸರಂತೆ ವರ್ತಿಸುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ನನ್ನ ಹಾಗೂ ವಿರಾಟ್ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳು ರಾಕ್ಷಸರಂತೆ ವರ್ತಿಸಿದ್ದವು. ಆದರೆ ಇದರಿಂದ ನನಗೇನು ನಷ್ಟವಾಗಿಲ್ಲ ಮತ್ತು ನಾನು ಆ ಬಗ್ಗೆ ಯಾವತ್ತೂ ತಲೆಕೆಡಿಸಿಕೊಂಡಿಲ್ಲ ಎಂದು ಅನುಷ್ಕಾ ಶರ್ಮಾ ಹೇಳಿದ್ದಾರೆ.
ವಿಶ್ವಕಪ್ ಸೆಮಿಫೈನಲ್ನಲ್ಲಿ ವಿರಾಟ್ ಕಳಪೆ ಪ್ರದರ್ಶನ ನೀಡಿ, ಭಾರತ ಸೋತಾಗ ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತರಹೇವಾರಿ ಹಾಸ್ಯ ಹಾಗೂ ಬೈಗುಳಗಳು ವ್ಯಕ್ತವಾದವು. ಆದರೆ ನಾನು ಇದಕ್ಕೆಲ್ಲ ತಲೆಕಡಿಸಿಕೊಂಡಿಲ್ಲ. ನೀವು ನಿಜವಾಗಿಯು ದೇಶ ಪ್ರೇಮ ಹೊಂದಿರುವುದೇ ಆದರೆ ಒಂದು ಘಟನೆಯನ್ನು ಪಾರದರ್ಶಕವಾಗಿ ನೋಡಿ ಮಾತನಾಡಿ. ಯಾವುದೇ ಒಬ್ಬ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


