ಬಾಲಿವುಡ್

ಕಬಾಲಿ ಹವಾ: ಹಿಂದಿ ರಿಮೇಕ್ ನಲ್ಲಿ ಅಮಿತಾಬ್ ಬಚ್ಚನ್ ನಟನೆ?

ರಜನಿಕಾಂತ್ ಅಭಿನಯದ ಕಬಾಲಿ ಚಿತ್ರವನ್ನು ಮತ್ತೊಮ್ಮೆ ಹಿಂದಿಯಲ್ಲಿ ರಿಮೇಕ್ ಮಾಡಿ ರಜನಿ ಪಾತ್ರಕ್ಕೆ ಮೆಗಾಸ್ಟಾರ್ ಅಮಿತಾಭ್ ಬಚ್ಚನ್​ರನ್ನು ಕರೆತರಲು ಎಲ್ಲ ತಯಾರಿ ..

ಕಬಾಲಿ ಹವಾ: ಹಿಂದಿ ರಿಮೇಕ್ ನಲ್ಲಿ ಅಮಿತಾಬ್ ಬಚ್ಚನ್ ನಟನೆ?
ಅಮಿತಾಬ್ ಬಚ್ಚನ್
Published On :

ಮುಂಬೈ: ರಜನಿಕಾಂತ್ ಅಭಿನಯದ ಕಬಾಲಿ ಚಿತ್ರವನ್ನು ಮತ್ತೊಮ್ಮೆ ಹಿಂದಿಯಲ್ಲಿ ರಿಮೇಕ್ ಮಾಡಿ ರಜನಿ ಪಾತ್ರಕ್ಕೆ ಮೆಗಾಸ್ಟಾರ್ ಅಮಿತಾಭ್ ಬಚ್ಚನ್​ರನ್ನು ಕರೆತರಲು ಎಲ್ಲ ತಯಾರಿ ನಡೆದಿದೆ ಎನ್ನಲಾಗಿದೆ.

ಕಬಾಲಿ ಹಿಂದಿಯಲ್ಲಿ ಡಬ್ ಆಗಿದ್ದರೂ, ನಿಗದಿತ ಪ್ರಮಾಣದ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಕರೆತರಲು ಸಾಧ್ಯವಾಗಿಲ್ಲ ಎಂಬುದನ್ನು ಮನಗಂಡು ಹಿಂದಿಯಲ್ಲೆ ಕಬಾಲಿ ನಿರ್ಮಿಸುವ ಯೋಜನೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಪಂಚದಾದ್ಯಂತ 12 ಸಾವಿರ ಸ್ಕ್ರೀನ್​ಗಳಲ್ಲಿ ಕಬಾಲಿ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಹೆಚ್ಚಿನ ಜನ ತಮಿಳಿನಲ್ಲೆ ಚಿತ್ರ ವೀಕ್ಷಿಸಲು ಅಪೇಕ್ಷಿಸಿದ್ದಾರೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಮಲಯ ಭಾಷೆಗಳಲ್ಲಿ ಕಬಾಲಿ ಡಬ್ ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.