ಉಡ್ತಾ ಪಂಜಾಬ್ ಕಮಾಲ್: ಮೊದಲ ದಿನವೇ 10.5 ಕೋಟಿ ರು ಕಲೆಕ್ಷನ್
ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಉಡ್ತಾ ಪಂಜಾಬ್ ಹಿಂದಿ ಚಿತ್ರಕ್ಕೆ ಉತ್ತರ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಬಿಡುಗಡೆಯಾದ ಮೂರು ..

ಮುಂಬಯಿ: ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಉಡ್ತಾ ಪಂಜಾಬ್ ಹಿಂದಿ ಚಿತ್ರಕ್ಕೆ ಉತ್ತರ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಬಿಡುಗಡೆಯಾದ ಮೂರು ದಿನಗಳಲ್ಲೇ 10.5 ಕೋಟಿ ರೂ. ಕಲೆಕ್ಷನ್ ಆಗಿದೆ.
ದೆಹಲಿ, ರಾಜಸ್ಥಾನ, ಗುಜರಾತ್‌ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಕಂಡುಬಂದಿದೆ. ಆದರೆ ಅಲ್ಲಿಕಂಡುಬಂದಂತಹ ಉತ್ಸಾಹದ ಪ್ರತಿಕ್ರಿಯೆ ದಕ್ಷಿಣ ಮತ್ತು ಈಶಾನ್ಯ ಪ್ರದೇಶದಲ್ಲಿ ಕಂಡುಬಂದಿಲ್ಲ. ಪೂರ್ವ ಪ್ರಾಂತ್ಯದ ಭಾಗದಲ್ಲಿ ಜನಪ್ರಿಯತೆ ಪಡೆಯುವಲ್ಲಿ ವಿಫಲವಾಗಿದೆ ಎಂದು ಚಿತ್ರ ಪ್ರದರ್ಶಕ ರಾಜೇಶ್ ತಡಾನಿ ಹೇಳಿದ್ದಾರೆ.
ಬಿಡುಗಡೆಗೂ ಮುನ್ನವೆ ಕೇಂದ್ರ ಸೆನ್ಸಾರ್ ಮಂಡಳಿ ಹಲವಾರು ದೃಶ್ಯಾವಳಿಗಳನ್ನು ಕಟ್ ಮಾಡಿ ಎಲ್ಲರ ಗಮನ ಸೆಳೆದಿತ್ತು. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಏಕ ತೆರೆಯ ಚಿತ್ರಮಂದಿರಗಳಲ್ಲಿ ಜನರನ್ನು ಸೆಳೆಯುವಲ್ಲಿ ವಿಫಲವಾಗಿದೆ. ಮೊದಲ ಪ್ರದರ್ಶನದಲ್ಲಿ ಅಷ್ಟು ಉತ್ತಮ ಪ್ರತಿಕ್ರಿಯೆ ದೊರೆತಿರಲಿಲ್ಲ, ನಂತರದ ಪ್ರದರ್ಶನಳಲ್ಲಿ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ ಎಂದು ಪಂಜಾಬ್ ನ ವಿತರಕರೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


