ಬಾಲಿವುಡ್

ಅತ್ಯಾಚಾರ ಹೇಳಿಕೆ: ಸಲ್ಮಾನ್ ಖಾನ್ ವಿರುದ್ಧ ದೂರು ದಾಖಲು

ಸುಲ್ತಾನ್ ಚಿತ್ರದ ಶೂಟಿಂಗ್ ನಂತರ ಮಹಿಳೆಯೊಬ್ಬಳು ಅತ್ಯಾಚಾರಕ್ಕೆ ಒಳಗಾದಂತಹ ಅನುಭವ ನನಗಾಗಿತ್ತು ಎಂಬ ಸಲ್ಮಾನ್ ಖಾನ್ ಹೇಳಿಕೆಯನ್ನು ಖಂಡಿಸಿ...

ಅತ್ಯಾಚಾರ ಹೇಳಿಕೆ: ಸಲ್ಮಾನ್ ಖಾನ್ ವಿರುದ್ಧ ದೂರು ದಾಖಲು
ಸಲ್ಮಾನ್ ಖಾನ್
Published On :

ಮುಂಬೈ: ಸುಲ್ತಾನ್ ಚಿತ್ರದ ಶೂಟಿಂಗ್ ನಂತರ ಮಹಿಳೆಯೊಬ್ಬಳು ಅತ್ಯಾಚಾರಕ್ಕೆ ಒಳಗಾದಂತಹ ಅನುಭವ ನನಗಾಗಿತ್ತು ಎಂಬ ಸಲ್ಮಾನ್ ಖಾನ್ ಹೇಳಿಕೆಯನ್ನು ಖಂಡಿಸಿ, ರಾಷ್ಟ್ರೀಯ ಕಾಂಗ್ರೆಸ್ ಮಹಿಳಾ ಮೋರ್ಚಾ ನಾಗಪುರದಲ್ಲಿ ದೂರು ದಾಖಲಿಸಿದೆ.

ರಾಷ್ಟ್ರೀಯ ಕಾಂಗ್ರೆಸ್​ನ ಮಹಾರಾಷ್ಟ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ವಾಘ್ ಲಿಖಿತ ದೂರನ್ನು ಸಿತಬುಲ್ಡಿ ಪೊಲೀಸ್ ಠಾಣೆಗೆ ನೀಡುವ ಮೂಲಕ ಪ್ರಕರಣ ದಾಖಲಿಸಿದ್ದಾರೆ.

ಸಲ್ಮಾನ್ ಖಾನ್ ಮಹಿಳೆಯರ  ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ ಮಹಿಳೆಯರನ್ನು ಲಘುವಾಗಿ ಪರಿಗಣಿಸಿ ಅವಮಾನ ಮಾಡಿದ್ದಾರೆ. ಆದ್ದರಿಂದ ಸಂಬಂಧಿಸಿದ ಐಪಿಸಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಕೂಡ ಮಹಿಳಾ ಸದಸ್ಯರು ಕಪ್ಪು ರಿಬ್ಬನ್ ಪಟ್ಟಿ ಕಟ್ಟಿಕೊಂಡು ಸಲ್ಮಾನ್ ವಿರುದ್ಧ ಘೊಷಣೆ ಕೂಗಿದರು. ಮಂಗಳವಾರ ಸಲ್ಮಾನ್ ಹೇಳಿಕೆಯನ್ನು ಖಂಡಿಸಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಮಂಗಳಂ, ಏಳು ದಿನಗಳೊಳಗೆ ಸಲ್ಮಾನ್ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.