ಬಾಲಿವುಡ್

ಉಡ್ತಾ ಪಂಜಾಬ್ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯಲು ಆಲಿಯಾ ಅರ್ಹಳು: ಕರೀನಾ ಕಪೂರ್

ಉಡ್ತಾ ಪಂಜಾಬ್ ಚಿತ್ರದಲ್ಲಿ ಆಲಿಯಾ ಭಟ್ ಅತ್ಯುತ್ತಮವಾಗಿ ನಟನೆ ಮಾಡಿದ್ದು, ರಾಷ್ಟ್ರಪ್ರಶಸ್ತಿ ಪಡೆಯಲು ಆಲಿಯಾ ಅರ್ಹಳಾಗಿದ್ದಾಳೆಂದು ನಟಿ ಕರೀನಾ ಕಪೂರ್ ಹೇಳಿಕೊಂಡಿದ್ದಾರೆ...

ಉಡ್ತಾ ಪಂಜಾಬ್ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯಲು ಆಲಿಯಾ ಅರ್ಹಳು: ಕರೀನಾ ಕಪೂರ್
ನಟಿ ಕರೀನಾ ಕಪೂರ್ ಮತ್ತು ಆಲಿಯಾ ಭಟ್ (ಸಂಗ್ರಹ ಚಿತ್ರ
Published On :

ನವದೆಹಲಿ: ಉಡ್ತಾ ಪಂಜಾಬ್ ಚಿತ್ರದಲ್ಲಿ ಆಲಿಯಾ ಭಟ್ ಅತ್ಯುತ್ತಮವಾಗಿ ನಟನೆ ಮಾಡಿದ್ದು, ರಾಷ್ಟ್ರಪ್ರಶಸ್ತಿ ಪಡೆಯಲು ಆಲಿಯಾ ಅರ್ಹಳಾಗಿದ್ದಾಳೆಂದು ನಟಿ ಕರೀನಾ ಕಪೂರ್ ಹೇಳಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಉಡ್ತಾ ಪಂಜಾಬ್ ಚಿತ್ರ ಬಿಡುಗಡೆ ಸಮಾರಂಭಾದಲ್ಲಿ ಭಾಗವಹಿಸಿ ಮಾತನಾಡಿದ್ದ ಶಾಹಿದ್ ಕಪೂರ್ ಅವರು ಚಿತ್ರದಲ್ಲಿ ಆಲಿಯಾ ಭಟ್ ಉತ್ತಮವಾಗಿ ನಟಿಸಿದ್ದು, ಆಕೆಗೆ ರಾಷ್ಟ್ರಪ್ರಶಸ್ತಿ ಲಭಿಸಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಸಂಬಂಧ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಕರೀನಾ ಕಪೂರ್ ಅವರು, ಉಡ್ತಾ ಪಂಜಾಬ್ ಚಿತ್ರದ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯಲು ಆಲಿಯಾ ಭಟ್ ಅರ್ಹಳು ಎಂಬ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಪ್ರಶಸ್ತಿಗೆ ನಾವು ಸಾಕಷ್ಟು ಪ್ರಾಮುಖ್ಯತೆಯನ್ನು ನೀಡುತ್ತೇವೆ. ಚಿತ್ರದ ನಟನೆಗೆ ಆಲಿಯಾ ರಾಷ್ಟ್ರಪ್ರಶಸ್ತಿ ಪಡೆಯಲು ಅರ್ಹಳು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.