ಜೇಮ್ಸ್ ಬಾಂಡ್ ರೂಪದಲ್ಲಿ ಬಿಗ್ ಬಿ
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಜೇಮ್ಸ್ ಬಾಂಡ್ ರೂಪದಲ್ಲಿ...

Published On :
ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಜೇಮ್ಸ್ ಬಾಂಡ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನಿಯತಕಾಲಿಕೆಯೊಂದರ ಮುಖ ಪುಟದಲ್ಲಿ ಜೇಮ್ಸ್ ಬಾಂಡ್ ರೂಪದಲ್ಲಿ ಕಾಣಿಸಿಕೊಳ್ಳಲಿರುವ ಬಿಗ್ ಬಿ, ಫೋಟೋ ಶೂಟ್ ನಡೆಸಿದ್ದಾರೆ.
ಸುಂದರಿಯರು ಜೇಮ್ಸ್ ಬಾಂಡ್ ಸುತ್ತುವರೆದಿರುವ ರೀತಿಯಲ್ಲೇ ಬಿಗ್ ಬಿ ಅವರನ್ನು ಸುಂದರಿಯರು ಸುತ್ತುವರಿದಿರುವ ಪೋಟೋ ಶೂಟ್ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.
ಭಾನುವಾರ ಮುಂಜಾನೆ ಈ ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದೇನೆ ಎಂದು ಅಮಿತಾಬ್ ಅವರು ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ.
73 ವರ್ಷದ ಅಮಿತಾಬ್, ''ತಮ್ಮ ವಯಸ್ಸಿನವರು ಇಂತಹ ಅವಕಾಶವನ್ನು ಪಡೆಯುವುದು ಅಪರೂಪ. ನಾನು ಈ ಪಾತ್ರಕ್ಕೆ ಸರಿ ಹೋಗುವುದಿಲ್ಲ ಅನಿಸಿತ್ತು. ಆದರೆ, ಅಗಿದ್ದಾಗಲಿ ಎಂದು ಮಾಡಿಯೇ ಬಿಡೋಣ ಎಂದು ನಿರ್ಧರಿಸಿ ಫೋಟೋ ಶೂಟ್ ಮಾಡಿದ್ದೇನೆ'' ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


