ಬಾಕ್ಸ್ ಆಫೀಸ್ ಹಿಟ್ ಗಾಗಿ ನಾನು ಅಭಿನಯಿಸುವುದಿಲ್ಲ: ಐಶ್ವರ್ಯಾ ರೈ
ನನ್ನ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಮಾಡಬೇಕೆಂದು ಬಯಸಿ ನಾನು ಯಾವತ್ತೂ ಸಿನಿಮಾ ಮಾಡುವುದಿಲ್ಲ ಎಂದು...

ಮುಂಬಯಿ: ನನ್ನ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಮಾಡಬೇಕೆಂದು ಬಯಸಿ ನಾನು ಯಾವತ್ತೂ ಸಿನಿಮಾ ಮಾಡುವುದಿಲ್ಲ ಎಂದು ನಟಿ ಐಶ್ವರ್ಯ ರೈ ಹೇಳಿದ್ದಾರೆ.
ಬಾಕ್ಸ್ ಆಫೀಸ್‌ನಲ್ಲಿ ಚಿತ್ರದ ಹಿಟ್ ಕುರಿತು ಯೋಚನೆ ಮಾಡಿ ನಟಿಸುವುದಿಲ್ಲ, ಅದನ್ನು ನಾನು ಎಂದಿಗೂ ನಿರೀಕ್ಷೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನನ್ನ ಅಭಿಮಾನಿಗಳು ಪ್ರೋತ್ಸಾಹವೇ ಸಾಕು ಎಂದು ತಿಳಿಸಿದ್ದಾರೆ. ಈ ಚಿತ್ರವನ್ನು ದೇಶಾದ್ಯಂತ ತೆರಿಗೆ ಇಲ್ಲದೇ ಬಿಡುಗಡೆ ಮಾಡಲಾಗುತ್ತಿದೆ. ಇದೊಂದು ಸೂಕ್ಷ್ಮ ಕಥಾ ಹಂದರವುಳ್ಳ ಚಿತ್ರವಾಗಿದ್ದು ಪ್ರೇಕ್ಷಕನಿಗೆ ಇಷ್ಟವಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಸರಬ್ಜಿತ್ ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್, ರಣದೀಪ್ ಹೂಡಾ ಹಾಗೂ ರಿಚಾ ಚಡ್ಡಾ ಅಭಿನಯ ಅವೋಘವಾಗಿ ಮೂಡಿ ಬಂದಿದ್ದು ಪ್ರೇಕ್ಷಕರಿಗೆ ಈ ಚಿತ್ರ ಇಷ್ಟವಾಗ್ತಿದೆ.
ಚಿತ್ರದ ಪ್ರಮುಖ ಪಾತ್ರದಲ್ಲಿ ಐಶ್ವರ್ಯ ರೈ ಹಾಗೂ ರಣದೀಪ್ ಅಭಿನಯಿಸಿದ್ದಾರೆ. ಇನ್ನೂ ಚಿತ್ರದಲ್ಲಿ ಸರಬ್ಜಿತ್ ಸಹೋದರಿ ಪಾತ್ರ ಮಾಡಿರುವ ಐಶ್ವರ್ಯ ರೈ ಅವರ ನಟನೆ ಎಲ್ಲರನ್ನು ತನ್ನತ್ತ ಸೆಳೆಯುವಂತೆ ಮಾಡುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


