2005ರ ಹಲ್ಲೆ ಪ್ರಕರಣ: ಆದಿತ್ಯ ಪಾಂಚೋಲಿಗೆ ಒಂದು ವರ್ಷ ಜೈಲು ಶಿಕ್ಷೆ
2005ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಆದಿತ್ಯ ಪಾಂಚೋಲಿ ಅವರಿಗೆ ಮೆಟ್ರೊಪೊಲಿಟನ್ ಕೋರ್ಟ್ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು

Published On :
ಮುಂಬೈ: 2005ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಆದಿತ್ಯ ಪಾಂಚೋಲಿ ಅವರಿಗೆ ಮೆಟ್ರೊಪೊಲಿಟನ್ ಕೋರ್ಟ್ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆದಿತ್ಯ ಪಾಂಚೋಲಿ ಮುಂಬೈನ ಜುಹುನಲ್ಲಿರುವ ಪಂಚತಾರಾ ಹೊಟೇಲ್‌ವೊಂದರಲ್ಲಿ ನಡೆದ ನೈಟ್‌ಕ್ಲಬ್ ಪಾರ್ಟಿಯ ವೇಳೆ ಬೌನ್ಸರ್‌ವೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಶನಿವಾರ ತೀರ್ಪು ಪ್ರಕಟಿಸಿದ್ದು, ಅಪರಾಧಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರುಪಾಯಿ ದಂಡ ವಿಧಿಸಿದೆ. ಅಲ್ಲದೆ ಈ ತೀರ್ಪು ಜಾರಿಗೊಳಿಸಲು ಒಂದು ತಿಂಗಳ ಕಾಲವಕಾಶ ನೀಡಿದ್ದು, ಬಾಲಿವುಡ್ ನಟನಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.
ಇನ್ನು ಈ ತೀರ್ಪು ತುಂಬಾ ಕಠೋರವಾಗಿದೆ ಎಂದಿರುವ ಆದಿತ್ಯ ಪಾಂಚೋಲಿಯ ವಕೀಲರು, ಜಾಮೀನು ಕೋರಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Aditya Pancholiassault casesentenced to one year imprisonmentಹಲ್ಲೆ ಕೇಸ್ಆದಿತ್ಯ ಪಾಂಚೋಲಿಒಂದು ವರ್ಷ ಜೈಲು ಶಿಕ್ಷೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


