ಭಯೋತ್ಪಾದಕರ ದಾಳಿಯನ್ನು ಖಂಡಿಸಿದ ಪಾಕ್ ನಟಿ ಮಹಿರಾ ಖಾನ್
ಭಾರತ ಮತ್ತು ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ವಿಚಾರವಾಗಿ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಪಾಕಿಸ್ತಾನಿ ನಟಿ ಮಹಿರಾ ಖಾನ್ ...

ನವದೆಹಲಿ: ಭಾರತ ಮತ್ತು ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ವಿಚಾರವಾಗಿ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಪಾಕಿಸ್ತಾನಿ ನಟಿ ಮಹಿರಾ ಖಾನ್ ಉಗ್ರ ದಾಳಿಯನ್ನು ಖಂಡಿಸಿದ್ದಾರೆ. ಉಗ್ರ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ, ಜೀವ ಹಾನಿಯನ್ನು ಸಹಿಸಲಾಗದು. ಅದು ಯಾವ ದೇಶವೇ ಆಗರಲಿ,ಎಂದು ಮಹಿರಾ ಹೇಳಿದ್ದಾರೆ.
ಮುಂಬರುವ ಬಾಲಿವುಡ್ ಚಿತ್ರ ರಯೀಸ್‌ನಲ್ಲಿ ಶಾರೂಖ್ ಖಾನ್ ಜತೆ ಮಹಿರಾ ಖಾನ್ ನಟಿಸಿದ್ದಾರೆ. ಸೆಪ್ಟೆಂಬರ್ 18ರಂದು ಜಮ್ಮು ಕಾಶ್ಮೀರದ ಉರಿಯಲ್ಲಿ ಉಗ್ರ ದಾಳಿ ನಡೆದ ನಂತರ ಮಹಿರಾ ಇದೇ ಮೊದಲ ಬಾರಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಾಲಿವುಡ್‌ನಲ್ಲಿ ಕೆಲಸ ಮಾಡಿರುವ ಮತ್ತೊಬ್ಬ ಪಾಕ್ ನಟ ಫವದ್ ಖಾನ್ ಕೆಲ ದಿನಗಳ ಹಿಂದೆ, ವಿಶ್ವ ಶಾಂತಿಗಾಗಿ ಪ್ರಾರ್ಥನೆ ಮಾಡುವೆ ಎಂದಿದ್ದರು. ಇಬ್ಬರೂ ಪೇಸ್‌ಬುಕ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ನಾನು ಕಳೆದ 5 ವರ್ಷಗಳಿಂದ ಇಲ್ಲಿ ಅಭಿನಯಿಸುತ್ತಿದ್ದೇನೆ, ದೇಶದ ಗೌರವಕ್ಕೆ ಧಕ್ಕೆಯಾಗುವ ಯಾವುದೇ ರೀತಿಯ ಕೆಲಸವನ್ನು ನಾನು ಮಾಡಿಲ್ಲ. ನಾನೊಬ್ಬಳು ಪಾಕಿಸ್ತಾನದ ನಾಗರಿಕಳಾಗಿದ್ದೇನೆ,ನಾನು ಉಗ್ರ ವಾದವನ್ನು ಸಹಿಸೊಲ್ಲ, ಮಾನವರ ಜೀವ ಹಾನಿಯನ್ನ ಸಹಿಸಲಾಗದು ಎಂದು ಖಂಡಿಸಿದ್ದಾರೆ. ಪ್ರಪಂಚ ಶಾಂತಿ ನೆಮ್ಮದಿಯಿಂದ ಇರಬೇಕೆಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


