ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜಸ್ತಾನ ಸರ್ಕಾರ
ಕೃಷ್ಣ ಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ್ ಸಲ್ಮಾನ್ ಖಾನ್ ಖುಲಾಸೆಗೊಳಿಸಿದ ರಾಜಸ್ತಾನ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ತಾನ ಸರ್ಕಾರ ಸುಪ್ರೀಂ ...

ಜೈಪುರ: ಕೃಷ್ಣ ಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ್ ಸಲ್ಮಾನ್ ಖಾನ್ ಖುಲಾಸೆಗೊಳಿಸಿದ ರಾಜಸ್ತಾನ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ತಾನ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಶೂಟಿಂಗ್ ವೇಳೆ ಕೃಷ್ಣ ಮೃಗ ಬೇಟೆಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ರಾಜಸ್ಥಾನ ಹೈಕೋರ್ಟ್ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಜುಲೈ 25 ರಂದು ಖುಲಾಸೆಗೊಳಿಸಿ ತೀರ್ಪು ನೀಡಿತ್ತು.
1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ವೇಳೆ ಜೋಧ್ ಪುರದ ಬಳಿಯಲ್ಲಿರುವ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆ ಮತ್ತು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲು ವಿರುದ್ಧ ಎರಡು ದೂರು ದಾಖಲಾಗಿದ್ದವು.
ರಕ್ಷಿತ ಅರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್ಖಾನ್ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


