ಬಾಲಿವುಡ್

ತಮ್ಮ 75ನೇ ಹುಟ್ಟು ಹಬ್ಬ ಆಚರಿಸಿಕೊಳ್ಳದಿರಲು ಬಿಗ್ ಬಿ ನಿರ್ಧಾರ

ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಅಕ್ಟೋಬರ್ ನಲ್ಲಿ 75 ವರ್ಷ ವಸಂತಕ್ಕೆ ಕಾಲಿಡುತ್ತಿದ್ದು, ಈ ಮಹತ್ವದ ಹುಟ್ಟುಹಬ್ಬದಂದು ಯಾವುದೇ....

ತಮ್ಮ 75ನೇ ಹುಟ್ಟು ಹಬ್ಬ ಆಚರಿಸಿಕೊಳ್ಳದಿರಲು ಬಿಗ್ ಬಿ ನಿರ್ಧಾರ
ಅಮಿತಾಭ್ ಬಚ್ಚನ್
Published On :
ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಅಕ್ಟೋಬರ್ ನಲ್ಲಿ 75 ವರ್ಷ ವಸಂತಕ್ಕೆ ಕಾಲಿಡುತ್ತಿದ್ದು, ಈ ಮಹತ್ವದ ಹುಟ್ಟುಹಬ್ಬದಂದು ಯಾವುದೇ ಆಚರಣೆಯನ್ನು ತಾವು ಒಪ್ಪಿಕೊಳ್ಳುವುದಿಲ್ಲ ಮತ್ತು ಅಂಗೀಕರಿಸುವುದಿಲ್ಲ ಎಂದು ಹೇಳಿದ್ದಾರೆ.
ಅಮಿತಾಭ್ ಬಚ್ಚನ್ ಅವರು ಅಕ್ಟೋಬರ್ 11ರಂದು 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ವಿಶೇಷ ದಿನದ ಕುರಿತು ಟ್ವೀಟ್ ಮಾಡಿರುವ ಬಿಗ್ ಬಿ, ನನ್ನ 75ನೇ ಜನ್ಮ ದಿನದ ಆಚರಣೆ ಬಗ್ಗೆ ಹಲವರು ಬೆದರಿಕೆ ಹಾಕಿದ್ದಾರೆ ಮತ್ತು ಯೋಜನೆ ರೂಪಿಸಿದ್ದಾರೆ. ಆದರೆ ಇಂತಹ ಯಾವುದೇ ಆಚರಣೆಗೆ ನಾನು ಅನುಮತಿಸುವುದಿಲ್ಲ ಅಥವಾ ಒಪ್ಪಿಕೊಳ್ಳುವುದಿಲ್ಲ ಎಂದು ನಿಮಗೆ ತಿಳಿದಿರಲಿ. ಈ ಕುರಿತು ಯಾರಾದರೂ ನನ್ನ ಗಮನಕ್ಕೆ ತರದೆ ಯೋಚಿಸಿದ್ದರೆ ಅದನ್ನು ಹಿಂತೆಗೆದುಕೊಳ್ಳಬೇಕು. ಅದು ಕುಟುಂಬವೇ ಇರಲಿ ಅಥವಾ ಇತರರೆ ಆಗಿರಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.