ದಂಗಲ್ ನಟಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ
ಬಾಲಿವುಡ್ನ ಹೆಸರಾಂತ ದಂಗಲ್ ಚಿತ್ರದ ನಟಿ ಜೈರಾ ವಾಸೀಮ್ ಅವರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ.

Published On :
ಮುಂಬೈ: ಬಾಲಿವುಡ್ನ ಹೆಸರಾಂತ ದಂಗಲ್ ಚಿತ್ರದ ನಟಿ ಜೈರಾ ವಾಸೀಮ್ ಅವರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ದೆಹಲಿಯಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣಿಸುವಾಗ ಘಟನೆ ನಡೆದಿದ್ದು ಈ ಕುರಿತಂತೆ ನಟಿ ತನ್ನ ದುಃಖವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ವಿಮಾನದಲ್ಲಿ ನಟಿಯ ಹಿಂದೆ ಕುಳಿತಿದ್ದ ಮಧ್ಯ ವಯಸ್ಕನೊಬ್ಬ ಮಲಗಿದ್ದ ವೇಳೆ ನಟಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ವ್ಯಕ್ತಿಯ ಚಿತ್ರವನ್ನು ಸೆರೆ ಹಿಡಿಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಆದರೆ ಏರ್ ವಿಸ್ತಾರಾ ವಿಮಾನ ಸಿಬ್ಬಂದಿ ಯಾರೋಬ್ಬರು ಸಹಾಯಕ್ಕೆ ಬರಲಿಲ್ಲ. ಇದೀಗ ರಾಷ್ಟ್ರೀಯ ಮಹಿಳಾ ಆಯೋಗವು ವಿಮಾನ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಏರ್ ವಿಸ್ತಾರ ವಿಮಾನ ಸಂಸ್ಥೆ ಸಹ ಘಟನೆ ಕುರಿತಂತೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದು ಈ ಸಂಬಂಧ ತನಿಖೆ ನಡೆಸಿ ನ್ಯಾಯ ಒದಗಿಸುವುದಾಗಿ ಹೇಆಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲೈಂಗಿಕ ಕಿರುಕುಳDangalದಂಗಲ್Zaira Wasimallegedly molestedInstagram postAirvistara flight ಜೈರಾ ವಾಸೀಮ್ಇನ್ ಸ್ಟಾಗ್ರಾಮ್ ಪೋಸ್ಟ್ಏರ್ ವಿಸ್ತಾರ ವಿಮಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


