ಜಾತಿ ಸೂಚಕ ಪದ ಬಳಕೆ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕ್ಷಮೆಯಾಚನೆ
ಪರಿಶಿಷ್ಟ ಜಾತಿಗಳ ವಿರುದ್ಧ ಅವಹೇಳಕಾರಿ ಪದ ಬಳಸಿ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಈ ಸಂಬಂಧ ಕ್ಷಮೆ ಯಾಚಿಸಿದ್ದಾರೆ...

Published On :
ಮುಂಬೈ: ಪರಿಶಿಷ್ಟ ಜಾತಿಗಳ ವಿರುದ್ಧ ಅವಹೇಳಕಾರಿ ಪದ ಬಳಸಿ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಈ ಸಂಬಂಧ ಕ್ಷಮೆ ಯಾಚಿಸಿದ್ದಾರೆ.
ಇತ್ತೀಚೆಗೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಶಿಲ್ಪಾ ಶೆಟ್ಟಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಜಾತಿ ಸೂಚಕ ಪದ ಬಳಸಿದ್ದರು. ಇದರ ವಿರುದ್ಧ ಆಕ್ರೋಶಗಳು ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಶಿಲ್ಪಾ ಶೆಟ್ಟಿ ಅವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಯಾರದೇ ಭಾವನೆಗೆ ನೋವುಂಟು ಮಾಡುವ ಉದ್ದೇಶವಿರಲಿಲ್ಲ. ವಿವಿಧ ಜಾತಿ ಮತ್ತು ನಂಬಿಕೆ ಇರುವ ದೇಶದಲ್ಲಿ ಇರುವುದಕ್ಕೆ ಹೆಮ್ಮೆ ಪಡುವ ನಾನು, ಎಲ್ಲರ ಭಾವನೆಯನ್ನೂ ಗೌರವಿಸುತ್ತೇನೆ ಎಂದು ಟ್ವೀಟಿಸಿದ್ದಾರೆ.
ಶಿಲ್ಪಾ ಶೆಟ್ಟಿ ಮತ್ತು ಸಲ್ಮಾನ್ ಖಾನ್ ಅವರು ಟಿವಿ ಕಾರ್ಯಕ್ರಮಗಳಲ್ಲಿ 'ಭಾಂಗಿ' ಎಂಬ ಪದವನ್ನು ಬಳಸಿದ್ದಾರೆ, ಅದು ಇಡೀ ವಿಶ್ವದಾದ್ಯಂತ ಇರುವ ವಾಲ್ಮೀಕಿ ಸಮುದಾಯವನ್ನು ಅಪಮಾನಿಸುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Salman Khanಸಲ್ಮಾನ್ ಖಾನ್apologyಅವಹೇಳನಕಾರಿ ಭಾಷೆಕ್ಷಮೆಯಾಚನೆShilpa Shettyಶಿಲ್ಪಾ ಶೆಟ್ಟಿderogatory language
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


