ಹಾಗೆ ಕರೆದರೆ ಕೆನ್ನೆಗೆ ಬಾರಿಸ್ತೇನೆ ಅಂದಿದ್ರಂತೆ ಸಲ್ಮಾನ್ ಖಾನ್: ವರುಣ್ ಧವನ್
ಜುಡ್ವಾ-2 ಚಿತ್ರದ ಪತ್ರಿಕಾಗೋಷ್ಠಿ ವೇಳೆ ನಟ ವರುಣ್ ಧವನ್ ತಮ್ಮ ಬಾಲ್ಯದ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ...

ಮುಂಬೈ: ಜುಡ್ವಾ-2 ಚಿತ್ರದ ಪತ್ರಿಕಾಗೋಷ್ಠಿ ವೇಳೆ ನಟ ವರುಣ್ ಧವನ್ ತಮ್ಮ ಬಾಲ್ಯದ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಆಗಷ್ಟೇ ಚಿತ್ರರಂಗದಲ್ಲಿ ಬೆಳೆಯುತ್ತಿದ್ದ ಪ್ರತಿಭಾನ್ವಿತ ನಟನಾಗಿದ್ದರು. ಜುಡ್ವಾ ಚಿತ್ರವನ್ನು ತಂದೆ ಡೇವಿಡ್ ಧವನ್ ನಿರ್ದೇಶಿಸಿದ್ದು ಆಗ ಸಲ್ಮಾನ್ ಖಾನ್ ರನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತ್ತು. ಒಂದು ದಿನ ನಾನು ಸಲ್ಮಾನ್ ಖಾನ್ ಅವರನ್ನು ಅಂಕಲ್ ಎಂದು ಕರೆದಿದ್ದೆ ಅದಕ್ಕೆ ಸಲ್ಮಾನ್ ಅವರು ನನ್ನನ್ನು ಅಂಕಲ್ ಎಂದು ಕರೆದರೆ ನಿನ್ನ ಕೆನ್ನೆಗೆ ಬಾರಿಸುತ್ತೇನೆ ಎಂದು ಹೇಳಿದ್ದರಂತೆ.
ಜುಡ್ವಾ-2 ಚಿತ್ರವನ್ನು ವರುಣ್ ತಂದೆ ಡೇವಿಡ್ ಧವನ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರು ಪುಟ್ಟ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು ಇದೇ ಮೊದಲ ಬಾರಿಗೆ ಸಲ್ಮಾನ್ ಜತೆ ಸ್ಕ್ರೀನ್ ಶೇರ್ ಮಾಡಿದ್ದನ್ನು ವರುಣ್ ಧವನ್ ಹೇಳಿಕೊಂಡಿದ್ದಾರೆ.
ಜುಡ್ವಾ-2 ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು 2017ರ ಸೆಪ್ಟೆಂಬರ್ 29 ದೇಶಾದ್ಯಂತ ಚಿತ್ರ ಬಿಡುಗಡೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


