ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಜೀವನಾಧಾರಿತ ಚಿತ್ರದಲ್ಲಿ ಆಮೀರ್ ಖಾನ್ ನಟನೆ
ಬಾಲಿವುಡ್ ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಜೀವನಾಧಾರಿತ ಚಿತ್ರದಲ್ಲಿ ನಟಿಸುವುದು ಖಚಿತವಾಗಿದೆ...

Published On :
ಮುಂಬೈ: ಬಾಲಿವುಡ್ ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಜೀವನಾಧಾರಿತ ಚಿತ್ರದಲ್ಲಿ ನಟಿಸುವುದು ಖಚಿತವಾಗಿದೆ.
ಆಮೀರ್ ಯಾವುದೇ ಸಿನಿಮಾ ಮಾಡಲಿ ಒಂದು ಸಿನಿಮಾದಿಂದ ಮತ್ತೊಂದು ಸಿನಿಮಾಕ್ಕೆ ಅವರ ಪಾತ್ರ ಭಿನ್ನವಾಗಿರುತ್ತೆ. ಅಮೀರ್ ಖಾನ್ ಅಂತಹದ್ದೇ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದ್ದಾರೆ. ದಂಗಲ್ ಸಿನಿಮಾದಲ್ಲಿ ಅಮೀರ್ ಕುಸ್ತಿಪಟುವಾಗಿ ಕಾಣಿಸಿಕೊಂಡಿದ್ದರು. ಚಿತ್ರ ಬಾಲಿವುಡ್ ನಲ್ಲಿ ದೊಡ್ಡ ಯಶಸ್ಸು ಗಳಿಸಿತ್ತು. ಇದೀಗ ಅವರು ಮತ್ತೊಂದು ಜೀವನಾಧಾರಿತ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿ ಅವರು ಅವರು ಗಗನಯಾತ್ರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ರಾಕೇಶ್ ಶರ್ಮಾ ಜೀವನಾಧಾರಿತ ಚಿತ್ರವನ್ನು ಮಹೇಶ್ ಮಥಾಯ್ ನಿರ್ದೇಶಿಸಲಿದ್ದು ರಾಯ್ ಕಪೂರ್ ಫಿಲ್ಮಂ ಬ್ಯಾನರ್ ಅಡಿ ಸಿದ್ಧಾರ್ಥ್ ರಾಯ್ ಕಪೂರ್ ಮತ್ತು ಆಮೀರ್ ಖಾನ್ ಜಂಟಿಯಾಗಿ ನಿರ್ಮಿಸಲಿದ್ದಾರೆ. ಚಿತ್ರ 2018ಕ್ಕೆ ಬಿಡುಗಡೆಯಾಗಲಿದೆ ಎಂದು ಮುಂಬೈ ಮಿರರ್ ಪತ್ರಿಕೆ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


