ಬಾಲಿವುಡ್

ಮಹಿಳೆಯರಿಗೆ ಗೌರವ ಕೊಡುವುದನ್ನು ಪೋಷಕರು ತಮ್ಮ ಗಂಡು ಮಕ್ಕಳಿಗೆ ಹೇಳಿಕೊಡಬೇಕು: ಶಾರೂಖ್

ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಪೋಷಕರು ತಮ್ಮ ಗಂಡು ಮಕ್ಕಳಿಗೆ ಹೇಳಿಕೊಡಬೇಕು ಎಂದು ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ...

ಮಹಿಳೆಯರಿಗೆ ಗೌರವ ಕೊಡುವುದನ್ನು ಪೋಷಕರು ತಮ್ಮ ಗಂಡು ಮಕ್ಕಳಿಗೆ ಹೇಳಿಕೊಡಬೇಕು: ಶಾರೂಖ್
ಶಾರೂಖ್ ಖಾನ್
Published On :

ಮುಂಬಯಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಪೋಷಕರು ತಮ್ಮ ಗಂಡು ಮಕ್ಕಳಿಗೆ ಹೇಳಿಕೊಡಬೇಕು ಎಂದು ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಹೇಳಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಸಾಮೂಹಿಕ ಲೈಂಗಿಕ ದೌರ್ಜನ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾರೂಖ್ ಖಾನ್, ಅದು ತಪ್ಪು, ತಂದೆ ತಾಯಿಯರು ತಮ್ಮ ಪುತ್ರರಿಗೆ ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂಬುದರ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದ್ದಾರೆ.

ಎಲ್ಲಾ ಮಹಿಳೆಯರು ಮಗಳಾಗಿ ಮತ್ತು ತಾಯಿಯಾಗಿ ನಮ್ಮ ಹೃದಯಕ್ಕೆ ಹತ್ತಿರವಾಗುತ್ತಾರೆ. ಜಗತ್ತಿನಲ್ಲೇ ಅತಿ ಹೆಚ್ಚಾಗಿ ಗೌರವ ಸಲ್ಲಿಸುವ ಜನಗಳಲ್ಲಿ ಮಹಿಳೆ ಮೊದಲಿಗಳಾಗಿದ್ದಾಳೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಾದ ಸಮಯ ಇದಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ದೇವರ ಅತ್ಯದ್ಬುತ ಸೃಷ್ಟಿಯಾಗಿದೆ ಎಂದು ಶಾರೂಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.