ಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನಾ ಮೆರವಣಿಗೆಗೆ ಪ್ರಿಯಾಂಕಾ ಚೋಪ್ರಾ ಬೆಂಬಲ!
ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ವಾಷಿಂಗ್ ಟನ್ ನಲ್ಲಿ ನಡೆಯುತ್ತಿರುವ ಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನಾ ಮೆರವಣಿಗೆಗೆ ಬಾಲಿವುಡ್, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

Published On :
ಲಾಸ್ ಏಂಜಲೀಸ್: ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ವಾಷಿಂಗ್ ಟನ್ ನಲ್ಲಿ ನಡೆಯುತ್ತಿರುವ ಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನಾ ಮೆರವಣಿಗೆಗೆ ಬಾಲಿವುಡ್, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ತಮ್ಮ ಬಿಡುವಿಲ್ಲದ ಚಿತ್ರೀಕರಣ ವೇಳಾಪಟ್ಟಿಯಿಂದಾಗಿ ವಾಷಿಂಗ್ ಟನ್ ನಲ್ಲಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿರುವ ಪ್ರಿಯಾಂಕಾ ಚೋಪ್ರಾ, ಟ್ವಿಟರ್ ಮೂಲಕ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು, ವಾಷಿಂಗ್ ಟನ್ ಮಾರ್ಚ್ ನಲ್ಲಿ ಭಾಗವಹಿಸುತ್ತಿರುವ ನನ್ನ ಸಹೋದರ, ಸಹೋದರಿಯರ ಬಗ್ಗೆ ಹೆಮ್ಮೆ ಇದೆ. ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದುಕೊಂಡಿದ್ದೆ ಆದರೆ ಸಾಧ್ಯವಾಗುತಿಲ್ಲ ಎಂದು ಪ್ರಿಯಾಂಕಾ ಚೋಪ್ರಾ ಟ್ವೀಟ್ ಮಾಡಿದ್ದಾರೆ.
ಬೇ ವಾಚ್ ಅನ್ನೋ ಹಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿರುವ ಪ್ರಿಯಾಂಕಾ ಚೋಪ್ರಾ ಲಾಸ್ ಏಂಜಲೀಸ್ ನಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
priyanka choprasupportಬೆಂಬಲಪ್ರಿಯಾಂಕಾ ಚೋಪ್ರಾWashingtonವಾಷಿಂಗ್ ಟನ್Anti-Trump Women\'s Marchಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


