ಬಾಲಿವುಡ್

ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ವೇ?: ರಾಹುಲ್ ಗಾಂಧಿಗೆ ಮಧುರ್ ಭಂಡಾರ್ಕರ್ ಪ್ರಶ್ನೆ

ಬಾಲಿವುಡ್ ನ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಅವರ ಇಂದು ಸರ್ಕಾರ್ ಸಿನಿಮಾದ ಪ್ರಚಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿರುವುದಕ್ಕೆ ನಿರ್ದೇಶಕ ಮಧುರ್

ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ವೇ?: ರಾಹುಲ್ ಗಾಂಧಿಗೆ ಮಧುರ್ ಭಂಡಾರ್ಕರ್ ಪ್ರಶ್ನೆ
ಮಧುರ್ ಭಂಡಾರ್ಕರ್
Published On :
ಬಾಲಿವುಡ್ ನ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಅವರ ಇಂದು ಸರ್ಕಾರ್ ಸಿನಿಮಾದ ಪ್ರಚಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿರುವುದಕ್ಕೆ ನಿರ್ದೇಶಕ ಮಧುರ್ ಭಂಡಾರ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಇಂದು ಸರ್ಕಾರ್ ಚಿತ್ರದ ಬಗ್ಗೆ ನಾಗ್ಪುರದಲ್ಲಿ ನಡೆಯಬೇಕಿದ್ದ ಸುದ್ದಿಗೋಷ್ಠಿಗೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಖಾತೆಯನ್ನು ಟ್ಯಾಗ್ ಮಾಡಿ, ಟ್ವೀಟ್ ಮಾಡಿರುವ ಮಧುರ್ ಭಂಡಾರ್ಕರ್, ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ವೇ? ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿಯನ್ನು ನೀವು ಒಪ್ಪುತ್ತೀರೇ? ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ವೇ? ಎಂದು ಕೇಳಿದ್ದರೆ. 
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವಧಿಯಲ್ಲಿ ಜಾರಿಯಾಗಿದ್ದ ತುರ್ತು ಪರಿಸ್ಥಿತಿಯ ಕುರಿತಾಗಿ ಹಾಗೂ ಇಂದಿರಾಗಾಂಧಿ ಆಡಳಿತದ ಕುರಿತಾಗಿ ಇಂದು ಸರ್ಕಾರ್ ಚಿತ್ರ ನಿರ್ಮಿಸಲಾಗಿದ್ದು, ಇಂದಿರಾಗಾಂಧಿ, ಸಂಜಯ್ ಗಾಂಧಿ ಪ್ರೇರಿತ ಪಾತ್ರಗಳು ಇವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.