ಪಾಕಿಸ್ತಾನದಲ್ಲಿ ಟ್ಯೂಬ್ ಲೈಟ್ ಬಿಡುಗಡೆ?
ಬಿಡುಗಡೆಗೆ ಸಿದ್ಧವಾಗಿರುವ ಸಲ್ಮಾನ್ ಖಾನ್ ಅವರ ಮುಂದಿನ ಸಿನಿಮಾ ಟ್ಯೂಬ್ ಲೈಟ್ ಪಾಕಿಸ್ತಾನದಲ್ಲೂ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರ ನಿರ್ಮಾಪಕರು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Published On :
ಬಿಡುಗಡೆಗೆ ಸಿದ್ಧವಾಗಿರುವ ಸಲ್ಮಾನ್ ಖಾನ್ ಅವರ ಮುಂದಿನ ಸಿನಿಮಾ ಟ್ಯೂಬ್ ಲೈಟ್ ಪಾಕಿಸ್ತಾನದಲ್ಲೂ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರ ನಿರ್ಮಾಪಕರು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಲ್ಮಾನ್ ಖಾನ್ ಫಿಲ್ಮ್ಸ್ ನ ಸಿಒಒ ಹಾಗೂ ಸಹ ನಿರ್ಮಾಪಕರಾಗಿರುವ ಅಮರ್ ಭೂತಾಲಾ ಈ ಬಗ್ಗೆ ಹೇಳಿಕೆ ನೀಡಿದ್ದು, ಸಲ್ಮಾನ್ ಖಾನ್ ಫಿಲ್ಮ್ಸ್ ಯಶ್ ರಾಜ್ ಫಿಲ್ಮ್ಸ್ ಮೂಲಕ ’ಟ್ಯೂಬ್ ಲೈಟ್’ ಸಿನಿಮಾವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕೊಂಡೊಯ್ಯುವುದಕ್ಕೂ ಸಿದ್ಧವಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಸಲ್ಮಾನ್ ಖಾನ್ ಗೆ ಅಪಾರ ಅಭಿಮಾನಿಗಳಿದ್ದು, ಭಜರಂಗಿ ಭಾಯಿಜಾನ್ ಚಿತ್ರ ಬಿಡುಗಡೆಯ ನಂತರ ಅಭಿಮಾನಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ. ಪಾಕಿಸ್ತಾನದಲ್ಲಿ ಟ್ಯೂಬ್ ಲೈಟ್ ಸಿನಿಮಾ ಬಿಡುಗಡೆಗೆ ಸಿದ್ಧವಿದ್ದೇವೆ, ಇದೇ ವೇಳೆ ನೆಲದ ಕಾನೂನನ್ನೂ ಗೌರವಿಸುತ್ತೇವೆ ಎಂದು ಅಮರ್ ಭೂತಾಲಾ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ಪಾಕ್ ಕಲಾವಿದರಿಗೆ ಇಲ್ಲಿನ ಚಿತ್ರಗಳಲ್ಲಿ ನಟಿಸದಂತೆ ನಿಷೇಧಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯ ಚಿತ್ರಗಳನ್ನು ಪಾಕಿಸ್ತಾನ ನಿಷೇಧಿಸಿತ್ತು. ಆದರೆ ವರ್ಷಾರಂಭದಲ್ಲಿ ಪಾಕಿಸ್ತಾನ ಭಾರತೀಯ ಚಿತ್ರಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದು, ಟ್ಯೂಬ್ ಲೈಟ್ ಸಿನಿಮಾ ಬಿಡುಗಡೆಯಾಗಲಿದೆ. ಇದಕ್ಕೂ ಮುನ್ನ ಐಎಸ್ಐ ಏಜೆಂಟ್ ನ ಕಥಾಹಂದರ ಹೊಂದಿದ್ದ ಸಲ್ಮಾನ್ ಖಾನ್ ಹಾಗೂ ಕತ್ರಿಕಾ ಕೈಫ್ ಚಿತ್ರವನ್ನು ಪಾಕಿಸ್ತಾನ ನಿಷೇಧಿಸಿತ್ತು.
ಟ್ಯುಬ್ ಲೈಟ್ ಚಿತ್ರ 1962 ರಲ್ಲಿ ನಡೆದ ಭಾರತ-ಚೀನಾ ಯುದ್ಧಕ್ಕೆ ಸಂಬಂಧಿಸಿದ ಕಥೆ ಹೊಂದಿರುವ ಸಿನಿಮಾ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


