ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ ತಂದೆಯಾದ ಕರಣ್ ಜೋಹರ್
ಬಾಲಿವುಡ್‌ನ ಖ್ಯಾತ ನಿರ್ಮಾಪಕ, ಕಾಫಿ ವಿತ್ ಕರಣ್ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್ ವಿವಾಹವಾಗದೇ ಎರಡು ಮಕ್ಕಳ...

ಮುಂಬಯಿ: ಬಾಲಿವುಡ್‌ನ ಖ್ಯಾತ ನಿರ್ಮಾಪಕ, ಕಾಫಿ ವಿತ್ ಕರಣ್ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್ ವಿವಾಹವಾಗದೇ ಎರಡು ಮಕ್ಕಳ ತಂದೆಯಾಗಿದ್ದಾರೆ.
ಕರಣ್ ಜೋಹರ್ ಬಾಡಿಗೆ ತಾಯಿಯ ಮೂಲಕ ಮಗ ಮತ್ತು ಮಗಳನ್ನು ಪಡೆದಿದ್ದಾರೆ. ಕರಣ್ ತಮ್ಮ ಬುಕ್‌ನಲ್ಲಿ ತನಗೆ ಮಕ್ಕಳು ಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದರು.
ಮಗಳಿಗೆ ರೂಹಿ ಎಂದು ಮಗನಿಗೆ ಯಶ್ ಅಂತ ಹೆಸರಿಡಲಾಗಿದೆ. ತಾನು ತಂದೆಯಾದ ಖುಷಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಕರಣ್ ವೈದ್ಯಕೀಯ ವಿಜ್ಞಾನದ ಮೂಲಕ ತಂದೆಯಾಗಲು ಸಾಧ್ಯವಾಯಿತು ಎಂದಿದ್ದಾರೆ.
ನನ್ನ ಕುಟುಂಬಕ್ಕೆ ಇಬ್ಬರು ಮಕ್ಕಳು ಸೇರ್ಪಡೆಯಾಗಿರುವುದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಸಂತಸವಾಗುತ್ತಿದೆ. ನಾನು ತಂದೆಯಾಗಿದ್ದಕ್ಕೆ ನನಗೆ ಅತೀವ ಆನಂದವಾಗುತ್ತಿದೆ. ಔಷಧೀಯ ವಿಜ್ಞಾನದ ಸಹಾಯದಿಂದ ಎರಡು ಅಮೂಲ್ಯ ರತ್ನಗಳು ನನಗೆ ಸಿಕ್ಕಂತಾಗಿದೆ ಎಂದು ಕರಣ್ ಜೋಹರ್ ಟ್ವೀಟ್ ಮಾಡಿದ್ದಾರೆ.
ನನ್ನ ಜೀವನದಲ್ಲಿ ಎರಡು ಮಕ್ಕಳ ಆಗಮನದಿಂದಾಗಿ ನನ್ನ ಕೆಲಸ, ಓಡಾಟ ಮತ್ತು ಸಾಮಾಜಿಕ ಜವಾಬ್ದಾರಿಗಳಿಗೆ ಕೊಂಚ ಹಿನ್ನಡೆಯಾಗಲಿದೆ. ನಾನು ಅದಕ್ಕೆ ಮಾನಸಿಕವಾಗಿ ಸಿದ್ದವಾಗಿದ್ದೇನೆ. ನನ್ನ ಜೀವಮಾನದ ಕನಸನ್ನು ನನಸಾಗಿಸಲು ನೆರವಾದ ಆ ಮಹಾ ತಾಯಿಗೆ ನಾನು ಚಿರ ಋಣಿಯಾಗಿರುತ್ತೇನೆ ಎಂದು ಕರಣ್ ಜೋಹರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


