ಬಾಲಿವುಡ್

'ಪದ್ಮಾವತಿ'ಗೆ ಮತ್ತೆ ಸಂಕಷ್ಟ; ಚಿತ್ರ ಬಿಡುಗಡೆ ವಿರೋಧಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ

ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಬಹು ನಿರೀಕ್ಷಿತ ಚಿತ್ರ 'ಪದ್ಮಾವತಿ'ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಚಿತ್ರ ಬಿಡುಗಡೆಯನ್ನು ವಿರೋಧಿಸಿ ಗುಜರಾತ್ ಬಿಜೆಪಿ ಘಟಕ ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದೆ.

'ಪದ್ಮಾವತಿ'ಗೆ ಮತ್ತೆ ಸಂಕಷ್ಟ; ಚಿತ್ರ ಬಿಡುಗಡೆ ವಿರೋಧಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ
ಸಂಗ್ರಹ ಚಿತ್ರ
Published On :
ಮುಂಬೈ: ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಬಹು ನಿರೀಕ್ಷಿತ ಚಿತ್ರ 'ಪದ್ಮಾವತಿ'ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಚಿತ್ರ ಬಿಡುಗಡೆಯನ್ನು ವಿರೋಧಿಸಿ ಗುಜರಾತ್ ಬಿಜೆಪಿ ಘಟಕ ಚುನಾವಣಾ  ಆಯೋಗಕ್ಕೆ ಪತ್ರವೊಂದನ್ನು ಬರೆದಿದೆ.
ಪತ್ರದಲ್ಲಿ ಪದ್ಮಾವತಿ ಚಿತ್ರದಲ್ಲಿ ಕ್ಷತ್ರಿಯ ಜನಾಂಗದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಸನ್ನಿವೇಶಗಳಿವೆ. ಇದು ಕ್ಷತ್ರಿಯ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯಿದ್ದು, ಇದೇ ಕಾರಣಕ್ಕೆ ಚಿತ್ರ ಬಿಡುಗಡೆಗೆ ತಡೆ ನೀಡಬೇಕು  ಅಥವಾ ಚಿತ್ರ ಬಿಡುಗಡೆಗೂ ಮುನ್ನ ರಜಪೂತ ಸಮುದಾಯಕ್ಕೆ ಚಿತ್ರವನ್ನು ತೋರಿಸಬೇಕು ಎಂದು ಆಗ್ರಹಿಸಿದೆ. ಅಂತೆಯೇ ಚಿತ್ರತಂಡ ತಮ್ಮ ಈ ಬೇಡಿಕೆಗೆ ಒಪ್ಪಿದರೆ ಚಿತ್ರ ಬಿಡುಗಡೆ ವೇಳೆ ಅಥವಾ ನಂತರ ಯಾವುದೇ ಗಲಾಟೆ  ನಡೆಯುವುದಿಲ್ಲ ಎಂದು ಗುಜರಾತ್ ಬಿಜೆಪಿ ಘಟಕ, ಚುನಾವಣಾ ಆಯೋಗ ಹಾಗೂ ಸೆನ್ಸಾರ್ ಮಂಡಳಿಗೆ ಪತ್ರವೊಂದನ್ನು ಬರೆದಿದೆ. 
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಹಾಗೂ ರಜಪೂತ ನಾಯಕ ಐ.ಕೆ. ಜಡೇಜಾ ಅವರು, "ಚಿತ್ರದ ನಿರ್ದೇಶಕರ ಮುಂದೆ ಎರಡು ಆಯ್ಕೆಗಳನ್ನು ನೀಡಿದ್ದೇವೆ. ಚಿತ್ರವನ್ನು ಬ್ಯಾನ್ ಮಾಡಬೇಕು. ಇಲ್ಲ ಗುಜರಾತ್  ಚುನಾವಣೆ ನಂತರ ಚಿತ್ರ ಬಿಡುಗಡೆಯಾಗಬೇಕು. ಮುಂದಿನ ಚುನಾವಣೆಗೂ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ ಚಿತ್ರ ಬಿಡುಗಡೆಯಿಂದ ಗುಜರಾತ್ ಚುನಾವಣೆ ವೇಳೆ ಗಲಾಟೆಯಾಗುವ ಸಾಧ್ಯತೆಯಿದೆ" ಎಂದು  ಹೇಳಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಬಹುಕೋಟಿ ವೆಚ್ಚದ ಹಾಗೂ ಬಹು ತಾರಾಗಣದ ಚಿತ್ರ ಪದ್ಮಾವತಿ ವಿವಾದಗಳ ನಡುವೆಯೇ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರದಲ್ಲಿ ಪದ್ಮಾವತಿ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ  ನಟಿಸಿದ್ದಾರೆ. ಅಂತೆಯೇ ಚಿತ್ರದ ಪ್ರಧಾನ ಪಾತ್ರಗಳಲ್ಲಿ ನಟರಾದ ರಣವೀರ್ ಸಿಂಗ್ ಹಾಗೂ ಶಾಹಿದ್ ಕಪೂರ್ ಅಭಿನಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.