ಪದ್ಮಾವತಿ ವಿವಾದ: ಜಾವೇದ್ ಅಖ್ತರ್ ವಿರುದ್ಧ ದೂರು ದಾಖಲು
ರಜಪೂತರನ್ನು ಅವಹೇಳನ ಮಾಡಿರುವ ಕವಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಕೇಸ್ ದಾಖಲಿಸುವಂತೆ ಕಾರ್ಣಿ ಸೇನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ...

Published On :
ರಜಪೂತರನ್ನು ಅವಹೇಳನ ಮಾಡಿರುವ ಕವಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಕೇಸ್ ದಾಖಲಿಸುವಂತೆ ಕಾರ್ಣಿ ಸೇನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ವಿವಾದದ ಕೇಂದ್ರ ಬಿಂದುವಾಗಿರುವ ಪದ್ಮಾವತಿ ಚಿತ್ರವನ್ನು ರಾಜಸ್ಥಾನದಲ್ಲಿ ನಿಷೇಧಿಸಬೇಕು ಎಂದು ಕಾರ್ಣಿ ಸೇನೆ ಆಗ್ರಹಿಸಿದ್ದು ಇದೇ ವೇಳೆ ರಜಪೂತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಜಾವೇದ್ ಅಖ್ತರ್ ವಿರುದ್ಧ ಕೇಸ್ ದಾಖಲಿಸುವಂತೆ ಸೇನೆ ಪೊಲೀಸರಿಗೆ ದೂರು ನೀಡಿದೆ.
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಜಾವೇದ್ ಅಖ್ತರ್ ಈ ವೇಳೆ ಪದ್ಮಾವತಿ ಚಿತ್ರವನ್ನು ಸಮರ್ಥಿಸಿಕೊಂಡಿದ್ದರು. ಜತೆಗೆ ರಜಪೂತ ಆಡಳಿತಗಾರರು ಬ್ರಿಟೀಷರ ಅಧಿಕಾರದಲ್ಲಿ 200 ವರ್ಷ ಕಾಲ ಸೇವೆ ಸಲ್ಲಿಸಿದ್ದರೇ ಹೊರತು ಅವರ ವಿರುದ್ಧ ಹೋರಾಡಲಿಲ್ಲವೆಂದು ಪ್ರಶ್ನಿಸಿದ್ದರು.
ಜಾವೇದ್ ಅಖ್ತರ್ ಅಭಿಪ್ರಾಯ ರಜಪೂತರ ಇತಿಹಾಸವನ್ನು ಅಪಹಾಸ್ಯ ಮಾಡಿದೆ ಎಂದು ಕಾರ್ಣಿ ಸೇನೆ ಹೇಳಿದೆ. ಒಂದು ನಿರ್ದಿಷ್ಟ ಸಮುದಾಯವನ್ನು ಅವಮಾನಿಸಲು ಅಖ್ತರ್ ಉದ್ದೇಶಪೂರ್ವಕವಾಗಿ ಪ್ರಯತ್ನಿಸಿದ್ದಾರೆ ಎಂದು ಅವರ ವಿರುದ್ಧ ದೂರು ಸಲ್ಲಿಸಿದ್ದು ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Deepika Padukoneದೀಪಿಕಾ ಪಡುಕೋಣೆJaved Akhtarಜಾವೇದ್ ಅಖ್ತರ್Padmavatiಪದ್ಮಾವತಿKarni SenaRajputರಜಪೂತ್ಕಾರ್ಣಿ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


