ಪದ್ಮಾವತಿ ವಿವಾದ: ಪ್ರಧಾನಿ, ಅಮಿತಾಬ್ ಬಚ್ಚನ್ ಮೌನ ಕುರಿತು ಶತ್ರುಘ್ನ ಸಿನ್ಹಾ ಪ್ರಶ್ನೆ
ಪದ್ಮಾವತಿ ಚಿತ್ರ ವಿವಾದಕ್ಕೆ ಸಂಬಂಧಪಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮೆಗಾಸ್ಟಾರ್ ಅಮಿತಾಬ್ ....

Published On :
ನವದೆಹಲಿ: ಪದ್ಮಾವತಿ ಚಿತ್ರ ವಿವಾದಕ್ಕೆ ಸಂಬಂಧಪಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಮೌನವನ್ನು ಹಿರಿಯ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಪ್ರಶ್ನಿಸಿದ್ದಾರೆ.
ಪದ್ಮಾವತಿ ಚಿತ್ರಕ್ಕೆ ಸಂಬಂಧಪಟ್ಟಂತೆ ಇಷ್ಟೊಂದು ವಿವಾದಗಳು ನಡೆಯುತ್ತಿರುವಾಗ ಹಿರಿಯ ನಟರಾದ ಅಮಿತಾಬ್ ಬಚ್ಚನ್, ಅಮೀರ್ ಖಾನ್ ಹಾಗೂ ಶಾರೂಕ್ ಖಾನ್ ರಂಥ ಖ್ಯಾತ ನಟರು ಮೌನವಹಿಸಿದ್ದಾರೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಹಾಗೂ ನಮ್ಮ ಪ್ರಸಿದ್ಧ ಪ್ರಧಾನಿ(ಅಮೆರಿಕಾದ ಥಿಂಕ್ ಟಾಂಕ್ ಪಿಇಡಬ್ಲ್ಯು)ಯವರು ಕೂಡ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ದೊಡ್ಡ ವಿಷಯವಿದು ಎಂದು ಶತ್ರುಘ್ನ ಸಿನ್ಹಾ ಟ್ವೀಟ್ ಮಾಡಿದ್ದಾರೆ.
ಚಿತ್ರ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಹಿತಾಸಕ್ತಿ ಮತ್ತು ರಾಜಸ್ತಾನದ ರಜಪೂತರ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರಶ್ನೆ ಮಾಡುತ್ತಿದ್ದೇನೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿAmitabh Bachchanಅಮಿತಾಬ್ ಬಚ್ಚನ್ಶತ್ರುಘ್ನ ಸಿನ್ಹಾShatrugna SinhaPadmavati Rowಪದ್ಮಾವತಿ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


